ಸುಳ್ಯ: ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ|

ಸಮಗ್ರ ನ್ಯೂಸ್: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಳಿಸಿದ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ಫೆ.22 ರಂದು ನಡೆದಿದೆ.

Ad Widget ... ..

ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪಾರ್ ಆಗಿರುವ ಪದ್ಮಾವತಿ ಅವರು ಇಂದು ಮುಂಜಾನೆ ದುಗಲಡ್ಕ ಸೆಕ್ಷನಿ‌ನ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಧಾಳಿ ನಡೆಸಿದೆ. ಕಾಡು ಹಂದಿಯ ದಾಳಿಯಿಂದ ಮಹಿಳೆಯ ಬೆನ್ನು ಮತ್ತಿತರೆಡೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *