ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಸೌಜನ್ಯ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದು, ಆರೋಪಿಗಳ ಪತ್ತೆಹಚ್ಚಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ರಚಿಸಿ ಆರೋಪಿಗಳ ಪತ್ತೆಯಾಗದಂತೆ ಸಾಕ್ಷಿ ನಾಶಪಡಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದು, ಇದೀಗ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಸಿಬಿಐ ತನಿಖಾ ತಂಡಕ್ಕೆ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಯ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರಾದ ಎಂ.ಆರ್ ಬಾಲಕೃಷ್ಣ ವಾದ ಮಂಡಿಸಿದ್ದರು .
ಸೌಜನ್ಯ ಹತ್ಯೆ ಪ್ರಕರಣದಿಂದ ಸಂತೋಷ್ ರಾವ್ ರವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ, ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ, ನ್ಯಾಯ ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ.