Ad Widget .

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ನಡೆಯಿತು ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿವೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಕಾಂಗ್ರೆಸ್​​ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ ಗೆಲ್ಲುವ ಟಾಸ್ಕ್​ ಇದೆ. ನಾಲ್ಕು ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ 5ನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಆಡಳಿತರೂಢ ಕಾಂಗ್ರೆಸ್​​ಗೆ ಭಯ ಶುರುವಾಗಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ವೊಂದರಲ್ಲಿ ಕಾಂಗ್ರೆಸ್​ನ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಇದು ಕುತೂಹಲಕ್ಕೆ ಕಾರಣವಾಗಿದೆ.

Ad Widget . Ad Widget .

ಒಂದೇ ಹೋಟೆಲ್​ನಲ್ಲಿ ಒಂದು ಕಡೆ ಹಳೇ ಮೈಸೂರು ಭಾಗದ ಕಾಂಗ್ರೆಸ್​​ನ ಒಕ್ಕಲಿಗ ನಾಯಕರ ಸಭೆ ನಡೆದಿದ್ದರೆ, ಮತ್ತೊಂದೆಡೆ ಕಲಬುರಗಿ ಜಿಲ್ಲಾ ಕಾಂಗ್ರೆಸ್​ ನಾಯಕರು ಸಭೆ ನಡೆಸಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *