Ad Widget .

ಬೆಂಗಳೂರಿಗರಿಗೆ ಸಿಹಿ ಸುದ್ದಿ/ ಬೆಳಿಗ್ಗೆ ಐದರಿಂದ ಓಡಾಡಲಿದೆ ಮೆಟ್ರೋ

ಸಮಗ್ರ ನ್ಯೂಸ್: ಮೆಟ್ರೋ ರೈಲು ನಿಗಮವು ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಪೀಕ್ ಅವರ್ ಗಳಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಜನಸಂದಣಿ ಹೆಚ್ಚಾದ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ರೈಲು ಸೇವೆ ಕೂಡ ಆರಂಭ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ರೈಲುಗಳನ್ನು ಸಂಚರಿಸಲು ನಿರ್ಧಾರ ಮಾಡಿದೆ.

Ad Widget . Ad Widget .

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ರೈಲು ಸೇವೆ ಕೂಡ ಆರಂಭವಾಗುತ್ತಿದ್ದು, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲು ಹೊರಡಲಿದೆ. ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಬೆಳಗ್ಗೆ 5.00 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.

Ad Widget . Ad Widget .

ಇದರ ಜೊತೆಗೆ ಮೆಜೆಸ್ಟಿಕ್ ನಿಂದ ಗರಡುಚಾರ್ ಪಾಳ್ಯ ಸ್ಟೇಷನ್ ಗಳ ನಡುವೆ ಪೀಕ್ ಅವರ್ ನಲ್ಲಿ ಹೆಚ್ಚು ರೈಲು ಓಡಾಟ ನಡೆಸಲು ಚಿಂತನೆ ನಡೆಸಿದೆ. ಈ ಮಾರ್ಗಗಳಲ್ಲಿ ಬೆಳಗ್ಗೆ 8.45 ರಿಂದ ಬೆಳಗ್ಗೆ 10.20 ರವೆಗೆ ಪ್ರತಿ 3 ನಿಮಿಷಕ್ಕೊಂದು ರೈಲು ಸಂಚಾರ ಮಾಡುವುದಾಗಿ ತಿಳಿಸಿದೆ. ಟ್ರಿನಿಟಿ, ಇಂದಿರಾನಗರ, ಕೆ ಆರ್ ಪುರಂ, ಬೆನ್ನಿಗನಹಳ್ಳಿ ಪ್ರಯಾಣಿಕರ ಅವಶ್ಯಕತೆಗಳನ್ನ ಪೂರೈಸಲು ಬಿಎಂಆರ್‍ಸಿಎಲ್ ಪ್ಲಾನ್ ಮಾಡಿದ್ದು, ಇದೇ ಸೋಮವಾರದಿಂದ ಬೆಳಗ್ಗಿನ ದಟ್ಟಣೆಯ ಸಮಯದಲ್ಲಿ ಹೆಚ್ಚುವರಿ ಮೆಟ್ರೋ ಸೇವೆ ಆರಂಭವಾಗಲಿದೆ.

Leave a Comment

Your email address will not be published. Required fields are marked *