ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಸಮಗ್ರ ನ್ಯೂಸ್: ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ (87 ವರ್ಷ) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Ad Widget ... ..

ಕೆಲವು ತಿಂಗಳ ಹಿಂದೆ ಮನೋಹರ್ ಜೋಶಿ ಮೆದುಳಿನ ರಕ್ತಸ್ರಾವದಿಂದ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಚೇತರಿಸಿಕೊಂಡ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಮನೋಹರ್ ಜೋಶಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

Ad Widget

Leave a Comment

Your email address will not be published. Required fields are marked *