Ad Widget .

ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ/ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‍ಗೆ ಕೋರ್ಟ್ ಸಮನ್ಸ್

ಸಮಗ್ರ ನ್ಯೂಸ್: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆಯ ಚುನಾವಣೆಯ ವೇಳೆ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್‍ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ದೂರಿನ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

Ad Widget . Ad Widget . Ad Widget .

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40% ಕಮಿಷನ್ ಮತ್ತಿತರ ಆರೋಪಗಳನ್ನು ಮಾಡಿತ್ತು. ಅಲ್ಲದೇ ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹೀರಾತು ನೀಡಿತ್ತು. ಈ ಜಾಹಿರಾತಿನಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.

ಮಾರ್ಚ್ 28ಕ್ಕೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಹಾಜರಾಗುವಂತೆ ನ್ಯಾಯಾಧೀಶರಾದ ಜೆ.ಪ್ರೀತ್ ಅವರು ಸಮನ್ಸ್ ನೀಡಿ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *