ಸಮಗ್ರ ನ್ಯೂಸ್: ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಿಣಂನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ 2ನೇ ಸ್ಪೇಸ್‍ಪೋರ್ಟನ್ನು ನಿರ್ಮಾಣ ಮಾಡಲು ಯೋಜಿಸಲಾಗಿದ್ದು, ಫೆ.28ರಂದು ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಸಣ್ಣಗಾತ್ರದ ಉಪಗ್ರಹ ಉಡಾವಣಾ ವಾಹಕಗಳನ್ನು ಉಡಾವಣೆ ಮಾಡುವುದಕ್ಕಾಗಿ ಈ ಹೊಸ ಸ್ಪೇಸ್‍ಪೋರ್ಟನ್ನು ಬಳಕೆ ಮಾಡಲಾಗುತ್ತದ್ದು, ಇದು ಮುಂದಿನ 2 ವರ್ಷದಲ್ಲಿ ನಿರ್ಮಾಣವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಿಣಂ ಮತ್ತು ಸಥಾನುಕುಲಂ ತಾಲೂಕುಗಳ ಪಡುಕಪಟ್ಟು, ಪಲ್ಲಕುರಿಚಿ ಮತ್ತು ಮಾತವಾನ್ ಕುರಿಚಿ ಗ್ರಾಮಗಳಿಗೆ ಸೇರಿದ 2,233 ಎಕರೆ ಪ್ರದೇಶದಲ್ಲಿ ಹೊಸ ಲಾಂಚ್‍ಪ್ಯಾಡ್ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ತಮಿಳುನಾಡು ಸರ್ಕಾರ 2 ಸಾವಿರ ಎಕರೆ ಪ್ರದೇಶದಲ್ಲಿ ಸ್ಪೇಸ್ ಕೈಗಾರಿಕೆ ಮತ್ತು ಪ್ರೊಪೆಲ್ಲೆಂಟ್ ಪಾರ್ಕ್ ನಿರ್ಮಾಣ ಮಾಡುತ್ತಿದೆ.