ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು

ಸಮಗ್ರ ನ್ಯೂಸ್:ಬಿಹಾರ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ಬಿಹಾರದ ಕೈಮೂರ್ ನಲ್ಲಿ ನಡೆದಿದೆ.

. Ad Widget . Ad Widget

ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್, ಚಾಲಕನ ನಿಯಂತ್ರಣ ತಪ್ಪಿ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್ ಮತ್ತು ಬೈಕ್ ಎರಡೂ ಪಕ್ಕದ ರಸ್ತೆಗೆ ದೂಡಲ್ಪಟ್ಟಿವೆ. ನಂತರ, ವೇಗವಾಗಿ ಬಂದ ಟ್ರಕ್ ಅವುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಬೈಕ್ ಸವಾರ ಸೇರಿದಂತೆ ಎಲ್ಲಾ ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

. Ad Widget . . Ad Widget . Ad Widget

ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಮೃತ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

Leave a Comment

Your email address will not be published. Required fields are marked *