ಸಮಗ್ರ ನ್ಯೂಸ್: ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಅನುಮತಿ ನೀಡಿದ ಆದೇಶ ಪ್ರಶ್ನಿಸಿ ಮಸೀದಿಯನ್ನು ನಿರ್ವಹಿಸುವ ಸಂಸ್ಥೆಯಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹಿಂದುಗಳಿಗೆ ಮತ್ತೆ ಜಯ ಸಿಕ್ಕಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶರು ನೀಡಿದ್ದ ಆದೇಶದಂತೆ ಪೂಜೆ ಮುಂದುವರಿಸಲಾಗುತ್ತದೆ ಎಂದು ತಿಳಿಸಿರುವ ಹೈಕೋರ್ಟ್, ಭಕ್ತರು ಪೂಜೆ ಸಲ್ಲಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಜೊತೆಗೆ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್‍ಗೆ ಅರ್ಚಕರನ್ನು ನಾಮನಿರ್ದೇಶನ ಮಾಡುವಂತೆ ಕೂಡಾ ಸೂಚಿಸಿದೆ.