Ad Widget .

ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ಲಿಂಕ್; ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್

ಸಮಗ್ರ ನ್ಯೂಸ್: ಯುವಜನರನ್ನು ಕಾಡುತ್ತಿರುವ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ. ಈ ಸಮಸ್ಯೆಗೂ ಕೋಮುವಾದಕ್ಕೂ ಲಿಂಕ್ ಇದೆ. ಉದ್ಯೋಗ ಸೃಷ್ಟಿ ಕಡಿಮೆಯಾದಂತೆ ಅಪರಾಧೀಕರಣ, ಕೋಮುವಾದ, ಭಯೋತ್ಪಾದನೆ, ವೇಶ್ಯಾವಾಟಿಕೆ ಮೊದಲಾದವು ಹೆಚ್ಚಾಗುತ್ತದೆ ಎಂದು ಜಸ್ಟೀಸ್ ಎಚ್. ಎನ್. ನಾಗಮೋಹನ ದಾಸ ಹೇಳಿದ್ದಾರೆ.

Ad Widget . Ad Widget .

ನಗರದ ಕಲ್ಲಾಪಿನಲ್ಲಿರುವ ಯುನಿಟಿ ಹಾಲ್‌ನಲ್ಲಿ ಫೆ. 25ರಂದು ನಡೆದ ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ನ 12ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತಾನಾಡಿದರು.

Ad Widget . Ad Widget .

ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗವು ಸಿಗುತ್ತಿಲ್ಲ. ಪದವಿ ಇದ್ದರೂ ಏನು ಪ್ರಯೋಜನವಿಲ್ಲದಂತಾಗಿದೆ. ಎಲ್ಲ ವಲಯದಲ್ಲಿ ಅರ್ಹ ಅಭ್ಯರ್ಥಿಗಳಿಲ್ಲ. ಅಸಂಪೂರ್ಣೋದ್ಯೋಗ ಕೂಡಾ ಒಂದು ಸಮಸ್ಯೆ ಆಗಿದೆ ಎಂದರು.
ಉದ್ಯೋಗ ಸೃಷ್ಟಿ ಕಡಿಮೆಯಾದಂತೆ ಅಪರಾಧೀಕರಣ, ಕೋಮುವಾದ, ಭಯೋತ್ಪಾದನೆ, ವೇಶ್ಯಾವಾಟಿಕೆ ಮೊದಲಾದವು ಹೆಚ್ಚಾಗುತ್ತದೆ. ನಿರುದ್ಯೋಗ ಸಮಸ್ಯೆಗೂ, ಕೋಮುವಾದ, ಅಪರಾಧಕ್ಕೂ ಲಿಂಕ್ ಇದೆ ಎಂದು ಸರ್ಕಾರ ತಿಳಿದುಕೊಳ್ಳಬೇಕು ಎಂದರು.

ಬಡತನ, ನಿರುದ್ಯೋಗ, ಕೋಮುವಾದ ಬಲಿಯೊಳಗೆ ಭಾರತ ಸಿಕ್ಕು ನರಳುತ್ತಿದೆ. ಇದರ ವಿರುದ್ಧ ಯುವಕರು ಹೋರಾಡಬೇಕಿದೆ. ಶಿಕ್ಷಣದಲ್ಲಿ ತಾರತಮ್ಯ ಹೆಚ್ಚಾಗುತ್ತಿದೆ. ಶ್ರೀಮಂತರಿಗೆ ಒಂದು, ಬಡವರಿಗೆ ಇನ್ನೊಂದು ಎಂಬ ಆಯ್ಕೆಯ ಮೂಲಕ ಮಕ್ಕಳಲ್ಲಿ ಅಸಮಾನತೆ, ಅಸೂಯೆ ಸೃಷ್ಟಿಯಗುತ್ತಿದೆ. ಈ ತಾರತಮ್ಯ ನಿಲ್ಲಬೇಕದರೆ, ಸಮಾನ ಗುಣಮಟ್ಟದ ಶಿಕ್ಷಣ ಸಿಗಬೇಕು, ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗ ಸೃಷ್ಟಿಯಾಬೇಕು ಎಂದರು.

ಸ್ವಾಗತ ಭಾಷಣ ಮಾಡಿದ ವಿಶ್ರಾಂತ ಜಿಲ್ಲಾಧಿಕಾರಿ (ಐಎಎಸ್), ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎ.ಬಿ. ಇಬ್ರಾಹಿಂ, “ಜನರು ಭ್ರಮಾಲೋಕದಲ್ಲಿದ್ದು ಮತ ಚಲಾಯಿಸುತ್ತಿದ್ದಾರೆ. ಕರಾವಳಿಯನ್ನು ಬುದ್ಧಿವಂತರ ಜಿಲ್ಲೆ ಎಂದು ಕರೆಯಲಾಗುತ್ತದೆ. ಆದರೆ ಪ್ರಸಕ್ತ ಸ್ಥಿತಿಯಲ್ಲಿ ನಾವು ಬುದ್ಧಿವಂತರು ಮತ್ತು ಅಕ್ಷರಸ್ಥರ ನಡುವೆ ಬೇರೆಯೇ ವ್ಯಾಖ್ಯಾನವನ್ನು ನೀಡಬೇಕಾಗಿದೆ,” ಎಂದು ಹೇಳಿದರು.

“ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ನೆಲವಿದು, ರಾಣಿ ಅಬ್ಬಕ್ಕರ ಮಾತೃ ಪ್ರಧಾನ ಸಮಾಜವಿದು. ಇದು ನಮಗೆ ಮಾದರಿಯಾಗಬೇಕಾದ ನೆಲ. ಇದು ಶೇಕಡ 100 ರಷ್ಟು ಅಕ್ಷರಸ್ಥರು ಇರುವ, ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಮ್ಮ ಜಿಲ್ಲೆ ಜಗತ್ತಿಗೆ ಮಾದರಿಯಾಗಬೇಕಾದ ಜಿಲ್ಲೆ. ಆದರೆ ಕಳೆದ ಮೂರು ದಶಕಗಳಲ್ಲಿ ನಮ್ಮ ಜಿಲ್ಲೆ, ನಗರ ಕುಖ್ಯಾತಿ ಪಡೆಯುತ್ತಾ ಬಂದಿರುವ ನೆಲವಾಗಿದೆ. ಹೊರ ಜಿಲ್ಲೆಯವರು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಪ್ರಶ್ನಿಸುವಂತಾಗಿದೆ ಎಂದರು.
ಜಿಲ್ಲೆಯಲ್ಲಿ ಮಹಿಳೆ, ಅಲ್ಪಸಂಖ್ಯಾತರು, ದಲಿತರ ಮೇಲೆ ದಾಳಿಯಾಗುತ್ತಿದೆ. ಇದು ಪ್ರತಿಗಾಮಿ ಶಕ್ತಿಗಳ ವಿರುದ್ಧ ನಡೆಯುತ್ತಿರುವ ಸಂಘರ್ಷ. ಇದನ್ನು ಜನರು ಅರ್ಥ ಮಾಡಿಕೊಂಡರೆ, ನಮ್ಮ ಸಂಘರ್ಷ ಜನರನ್ನು ತಲುಪಿದರೆ ಯಶಸ್ಸು. ಪ್ರಸಕ್ತ ನಮ್ಮ ನೆಲದ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಬಡತನಕ್ಕಿಂತ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ. ಇದರ ಬಗ್ಗೆ ಚರ್ಚೆ ನಡೆಯುವುದು ಅನಿವಾರ್ಯ. ಎಲ್ಲಾ ಸಮುದಾಯ ಇರುವ ನೆಲದಲ್ಲಿ ಕೋಮು ಸೌಹಾರ್ದತೆ ಯಾಕೆ ನಶಿಸಿಹೋಗುತ್ತಿದೆ ಎಂಬ ಚರ್ಚೆಯಾಗಬೇಕಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *