Ad Widget .

ತುಮಕೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು|ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ

ಸಮಗ್ರ ನ್ಯೂಸ್: ಒಂದೇ ವಾರದಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಫೆ.22ರಂದು 7 ಮಹಿಳೆಯರಿಗೆ ಆಪರೇಷನ್​ ಮಾಡಿದ್ದರು. ಹೆರಿಗೆ ಸೇರಿದಂತೆ ವೈದ್ಯರು ವಿವಿಧ ಆಪರೇಷನ್​ ಮಾಡಿದ್ದಾರೆ. 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ. ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇನ್ನೂ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ‌ ಸ್ಥಿತಿ ಗಂಭೀರವಾಗಿತ್ತು. ಬಳಿಕ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Ad Widget . Ad Widget . Ad Widget .

ಮೃತ ಮೂವರು ಫೆ. 22ರಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಮೃತರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಈ ಮೂರು ಜನರ ಸಾವಿಗೆ ನ್ಯಾಯ ಒದಗಿಸುವಂತೆ ಪಾವಗಡ- ಬಳ್ಳಾರಿ ರಸ್ತೆ ತಡೆದು ಮೃತರ ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದಾರೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *