ದ್ವೇಷ ಭಾಷಣ/ ಅಣ್ಣಾಮಲೈಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಸುಪ್ರೀಂ ಕೋರ್ಟ್‍ನಲ್ಲಿ, ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್‍ಜಿಒಗಳ ಕೈವಾಡ ಇದೆ ಎಂದು ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

. Ad Widget . Ad Widget

ಅಣ್ಣಾಮಲೈ ವಿರುದ್ಧ ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅವರು ಈ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ ಮದ್ರಾಸ್ ಹೈಕೋರ್ಟ್‍ಗೆ ಅಣ್ಣಾಮಲೈ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಮದ್ರಾಸ್ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

. Ad Widget . . Ad Widget . Ad Widget

ಅಣ್ಣಾಮಲೈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಸ್ಟೀಸ್ ಸಂಜೀವ ಖನ್ನಾ ಅವರಿದ್ದ ಏಕಸದಸ್ಯ ಪೀಠ ಪ್ರಕರಣಕ್ಕೆ ತಡೆ ನೀಡಿ. ದೂರು ದಾಖಲಿಸಿದ ವಿ. ಪಿಯೂಷ್ ಅವರಿಗೆ ನೋಟಿಸ್ ನೀಡಿದ್ದಾರೆ.

Leave a Comment

Your email address will not be published. Required fields are marked *