Ad Widget .

ನಾಳೆ ರಾಜ್ಯಸಭೆ ಚುನಾವಣೆ| ಜೆಡಿಎಸ್ ಶಾಸಕನ ಮನವೊಲಿಸುವಲ್ಲಿ ಎಚ್​.ಡಿ.ಕೆ ಯಶಸ್ವಿ

ಸಮಗ್ರ ನ್ಯೂಸ್: ಇಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಇಲ್ಲಿ ಜೆಡಿಎಸ್ ಗೆ ಒಂದು ಮತವು ಅಮೂಲ್ಯವಾಗಿದೆ. ಇಲ್ಲಿ ಮುಖ್ಯವಾಗಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರನ್ನು ಮನವೋಲಿಸುವಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​.ಡಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ.

Ad Widget . Ad Widget .

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಕಾರಣದಿಂದ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿರುವ ಶರಣಗೌಡ ಸಹೋದರ ಮಲ್ಲಿಕಾರ್ಜುನ್ ರೆಡ್ಡಿ ಅವರ ನಿವಾಸದಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ಅವರು ಶರಣಗೌಡ ಅವರನ್ನು ಮನವೋಲಿಸುವ ಕಸರತ್ತು ನಡೆಸಿದ್ದರು.

Ad Widget . Ad Widget .

ಮಲ್ಲಿಕಾರ್ಜುನ್ ಸಮ್ಮುಖದಲ್ಲಿ ನಡೆದ ಮಾತುಕತೆಯಲ್ಲಿ ಕೊನೆಗೂ ಶರಣಗೌಡ ಅವರನ್ನು ಮನವೊಲಿಸುವಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ಯಶಸ್ವಿಯಾಗಿದ್ದಾರೆ.

Leave a Comment

Your email address will not be published. Required fields are marked *