ರಾಜ್ಯಸಭಾ ಚುನಾವಣೆ| ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡ ಮತದಾನ

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.

Ad Widget ... ..

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು.

Ad Widget

ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ‌. ಆದರೆ ಅವರು ಕಾಲಾವಕಾಶ ನೀಡಲಿಲ್ಲ’ ಎಂದು ಆರೋಪಿಸಿದರು.

‘ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದು ಈ ಹಿಂದೆ ಶಾಸಕ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದರು.

Leave a Comment

Your email address will not be published. Required fields are marked *