Ad Widget .

ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್

ಸಮಗ್ರ ನ್ಯೂಸ್: ತುಮಕೂರಿನ ಪಾವಗಡ ತಾಲ್ಲೂಕು ಆಸ್ಪತ್ರೆಯಲ್ಲಿ ಮೊನ್ನೆ ಮೂರು ಜನ ಮಹಿಳೆಯರು ಸಾವು ಪ್ರಕರಣ ನಡೆದಿತ್ತು, ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರ ಮೃತ ಪಟ್ಟಿದ್ದರು. ಈಗ ಈ ಸಾವು ಪ್ರಕರಣ ಸಂಬಂಧ ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, OT ಟೆಕ್ನಿಷಿಯನ್ ಕಿರಣ್ ಹಾಗೂ ಸ್ಟಾಫ್ ನರ್ಸ್ ಪದ್ಮಾವತಿ ಅವರನ್ನು ಸೇವೆಯಿಂದ ವಜಾಗೊಳಿಸಿ ತುಮಕೂರು ಡಿಹೆಚ್​ಓ ಆದೇಶಿಸಿದ್ದಾರೆ.

Ad Widget . Ad Widget .

ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ.ಪೂಜಾ ಅವರನ್ನು ಕರ್ತವ್ಯ ಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿ ತೋರಿದ ಹಿನ್ನೆಲೆ ಸೇವೆಯಿಂದ ವಜಾ ಗೊಳಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *