ಸಮಗ್ರ ನ್ಯೂಸ್: ಮುಂದಿನ 5 ವರ್ಷಗಳವರೆಗೆ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಈ ಕುರಿತು ಅಮಿತ್ ಶಾ ಟ್ವಿಟ್ ಮಾಡಿದ್ದು, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿಯವರ ನೀತಿಯನ್ನು ಅನುಸರಿಸಿ ಸರ್ಕಾರವು ಜಮ್ಮು ಕಾಶ್ಮೀರದ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನ ಐದು ವರ್ಷಗಳವರೆಗೆ ವಿಸ್ತರಿಸಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರದ ಭದ್ರತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ವಿರುದ್ಧ ಸಂಘಟನೆಯು ತನ್ನ ಚಟುವಟಿಕೆಗಳನ್ನು ಮುಂದುವರಿಸುತ್ತಿರುವುದು ಕಂಡುಬಂದಿದೆ. 2019ರ ಫೆಬ್ರವರಿ 28ರಂದು ಈ ಸಂಘಟನೆಯನ್ನ ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಲಾಗಿತ್ತು.