Ad Widget .

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ದೀರ್ಘಕಾಲದ ಗಾಯದಿಂದಾಗಿ ಶಮಿ ಲಂಡನ್‍ನಲ್ಲಿ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024 ಸೇರಿದಂತೆ ಹಲವಾರು ಟೂರ್ನಿಗಳಿಂದ ಹೊರಗುಳಿಯಲಿದ್ದಾರೆ.

Ad Widget . Ad Widget .

‘ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ’ ಎಂದು ಪೋಟೋಗಳ ಸಮೇತ ಮೊಹಮ್ಮದ್ ಶಮಿ ಪೋಸ್ಟ್ ಮಾಡಿದ್ದಾರೆ. ಅದನ್ನು ನೋಡಿದ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ‘ನೀವು ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ, ನಿಮಗೆ ಬಹಳ ಮುಖ್ಯವಾದ ಈ ಗಾಯವನ್ನು ನೀವು ಧೈರ್ಯದಿಂದ ಜಯಿಸುತ್ತೀರಿ ಎಂದು ನನಗೆ ವಿಶ್ವಾಸವಿದೆ’ ಎಂದು ಬರೆದಿದ್ದಾರೆ.

Ad Widget . Ad Widget .

ಪ್ರಧಾನಿಯವರ ನಡೆಗೆ ಮೊಹಮ್ಮದ್ ಶಮಿ ಮಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೋದಿಯವರ ದಯೆ ಮತ್ತು ಚಿಂತನಶೀಲತೆಯನ್ನು ಶಮಿ ಮೆಚ್ಚಿದರು. ಪುನಶ್ಚತನ ಅವಧಿಯಲ್ಲಿ ಪ್ರಧಾನಿಯವರ ಬೆಂಬಲದ ಮಹತ್ವವನ್ನು ವಿವರಿಸಿದರು. ಆದಷ್ಟು ಶೀಘ್ರ ಚೇತರಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ. ಇವರ ಪೋಸ್ಟ್ ಸಾವಿರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, ಶೀಘ್ರವೇ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ.

Leave a Comment

Your email address will not be published. Required fields are marked *