ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದು, ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC)ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದೆ. 100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದರಂತೆ ವಾಣಿಜ್ಯ ಬಳಕೆದಾರರಿಗೂ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್ 1ರಿಂದಲೇ ಅನ್ವಯವಾಗಲಿದೆ. ವಿದ್ಯುತ್ ಪರಿಷ್ಕರಣ ದರ ಏಪ್ರಿಲ್ 1ರಿಂದ ಜಾರಿಯಾಗಲಿದೆ. ವಿದ್ಯುತ್ ದರ ಪರಿಷ್ಕರಣೆ ಮಾಡಿ KERC ಆದೇಶ ಹೊರಡಿಸಿದೆ.