ನಾಡಗೀತೆ ವಿವಾದ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ವರ್ಗಾವಣೆ

ಸಮಗ್ರ ನ್ಯೂಸ್: ಇತ್ತೀಚೆಗೆ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ವಿವಾದಾತ್ಮಕ ವಿಚಾವವೊಂದು ಹರಡಿತ್ತು. ಈ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇವರ ಜೊತೆಗೆ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮೂವರು ಐಎಎಸ್ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿದೆ.

Ad Widget ... ..

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಮೂಲ ಸೌಕರ್ಯ ಇಲಾಖೆ ಕಾರ್ಯದರ್ಶಿ ಡಾ.ಮಂಜುಳಾ, ಡಿಪಿಎಆರ್ ಕಾರ್ಯದರ್ಶಿ ಡಿ.ರಂದೀಪ್ ಹಾಗೂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎಂ.ದೀಪಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget

Leave a Comment

Your email address will not be published. Required fields are marked *