Ad Widget .

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಸಿದ್ದತೆ| ಮಾ.11ರಂದು ಮತದಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಮಾ.11ರಂದು ಚುನಾವಣೆ ನಡೆಯಲಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಫೆ.26ರಿಂದ ಪ್ರಾರಂಭಗೊಂಡಿದ್ದು, ನಾಮಪತ್ರ ಸಲ್ಲಿಸಲು ಮಾ. 3 ಅಂತಿಮ ದಿನವಾಗಿದೆ. ಮಾ.4ರಂದು ನಾಮಪತ್ರ ಪರಿಶೀಲನೆ, ಮಾ.5ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಅದೇ ದಿನ ರಿಟರ್ನಿಂಗ್‌ ಅಧಿಕಾರಿಯವರು ಅಭ್ಯರ್ಥಿಗಳಿಗೆ ಚಿಹ್ನೆಯನ್ನು ನೀಡಲಿದ್ದಾರೆ.

Ad Widget . Ad Widget . Ad Widget .

ಮಾ.11ರಂದು ಮಂಗಳೂರಿನ ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ಬೆಳಿಗ್ಗೆ ಗಂಟೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಮತ ಎಣಿಕೆಯಾಗಿ ಫಲಿತಾಂಶ ಘೋಷಣೆಯಾಗಲಿದೆ. ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಹರ್ಷವರ್ಧನ ಎಸ್.ಜೆ. ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

16 ಸ್ಥಾನಗಳಿಗೆ ಚುನಾವಣೆ:
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಒಟ್ಟು 16 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರಾಥಮಿಕ ವ್ಯವಸಾಯ, ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ 13 ಸ್ಥಾನ ಇದೆ. ಕುಂದಾಪುರ – 2, ಉಡುಪಿ -2, ಮಂಗಳೂರು-೪ ಸ್ಥಾನಗಳಿದ್ದು ಸುಳ್ಯ, ಪುತ್ತೂರು, ಕಾರ್ಕಳ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ತಲಾ ಒಂದು ಸ್ಥಾನ ಇದೆ. ಉಭಯ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘ, ಪಟ್ಟಣ ಸಹಕಾರಿ ಬ್ಯಾಂಕ್‌, ಕೃಷಿಯೇತರ ಸಹಕಾರಿ ಸಂಘ ಹಾಗೂ ಈ ಮೇಲಿನ ಮೂರು ತರಗತಿಯ ಸಂಘಗಳನ್ನು ಹೊರತು ಪಡಿಸಿ ಇತರ ಎಲ್ಲಾ ಸಹಕಾರ ಸಂಘಗಳಿಗೆ ತಲಾ ಒಂದು ಸ್ಥಾನ ಇದೆ.

Leave a Comment

Your email address will not be published. Required fields are marked *