Ad Widget .

ಪಿಎಂ ಕಿಸಾನ್ ಸಮ್ಮಾನ್ ನಿಧಿ/ 16 ನೇ ಕಂತನ್ನು ಬಿಡುಗಡೆ ಮಾಡಿದ ಮೋದಿ

ಸಮಗ್ರ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಬಿಡುಗಡೆ ಮಾಡಿದರು. ಒಟ್ಟು 21,000 ಕೋಟಿ ರೂಗೂ ಹೆಚ್ಚಿನ ಮೊತ್ತವನ್ನು, 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಪ್ರಧಾನಿ ಮೋದಿ ರಿಮೋಟ್ ಬಟನ್ ಒತ್ತುವ ಮೂಲಕ ರವಾನೆ ಮಾಡಿದ್ದಾರೆ. ಈ ಮೂಲಕ ಫಲಾನುಭವಿಗಳ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ.

Ad Widget . Ad Widget .

ಪಿಎಂ ಕಿಸಾನ್ ಯೋಜನೆಯು 2019ರಲ್ಲಿ ಆರಂಭವಾಗಿದ್ದು, ಇಲ್ಲಿಯವರೆಗೆ 16 ಕಂತುಗಳನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ. ಐದು ವರ್ಷದಲ್ಲಿ ಒಟ್ಟಾರೆ 3 ಲಕ್ಷ ಕೋಟಿ ರೂ ಹಣ ರೈತರಿಗೆ ಸಿಕ್ಕಿದೆ.

Ad Widget . Ad Widget .

Leave a Comment

Your email address will not be published. Required fields are marked *