ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಅಡ್ಡ ಮತದಾನ ಪ್ರಕ್ರಿಯೆಗೆ ಇದೀಗ ಕಾಂಗ್ರೆಸ್ ನಾಯಕರು ನಿರ್ಣಾಯಕ ತಿರುವು ನೀಡಿದ್ದು, ಇದೀಗ ಹಿಮಾಚಲ ಪ್ರದೇಶದ ಸ್ಪೀಕರ್ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪಕ್ಷಾಂತರ ವಿರೋಧಿ ಕಾನೂನಿನಡಿ ಕ್ರಮ ಕೈಗೊಂಡಿದ್ದು, ಅಗತ್ಯವಿದ್ದರೆ ಅನರ್ಹ ಶಾಸಕರು ನ್ಯಾಯಾಲಯದ ಮೊರೆ ಹೋಗಲಿ ಎಂದು ಹಿಮಾಚಲ ಪ್ರದೇಶ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ತಿಳಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರು ಯಾರಿಗಾದರೂ ಮತ ಹಾಕಬಹುದು ಎಂದು ಹಿಂದಿನ ನ್ಯಾಯಾಲಯ ಹೇಳಿದೆ. ಇದರ ಮೇಲೆ ಪಕ್ಷದ ವಿಪ್ ಯಾವುದೇ ಪ್ರಭಾವ ಬೀರುವುದಿಲ್ಲ. ಸ್ಪೀಕರ್ ಆದೇಶದ ನಂತರ ಆರು ಮಂದಿ ಕಾಂಗ್ರೆಸ್ ಸದಸ್ಯರು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.