Ad Widget .

ಜಯಪ್ರಕಾಶ್​ ಹೆಗ್ಡೆ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ…

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚು ಸುದ್ದು ಮಾಡಿದ ವಿಷಯಗಳಲ್ಲಿ ಈ ಜಾತಿ ಗಣತಿ ವರದಿ ಸಲ್ಲಿಕೆ ವಿಚಾರವೂ ಒಂದು. ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿಯನ್ನು, ಇಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು. ಇನ್ನು ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ.

Ad Widget . Ad Widget .

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ. ಕ್ಯಾಬಿನೆಟ್​​ನಲ್ಲಿ ಜಾತಿಗಣತಿ ವರದಿ ಚರ್ಚೆ ಮಾಡುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳತ್ತೇವೆ ಎಂದು ಹೇಳಿದರು.

Ad Widget . Ad Widget .

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ, ಕಾಂತರಾಜು ಸಮಿತಿ 2014-15ರಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದತ್ತಾಂಶ ಸಂಗ್ರಹ ಮಾಡಿತ್ತು. ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ನಾವು ವರದಿ ಸಿದ್ಧಪಡಿಸಿದ್ದೇವೆ​. ಜಾತಿಗಣತಿ ವರದಿಗೆ ಕಾರ್ಯದರ್ಶಿ, ಎಲ್ಲಾ ಸದಸ್ಯರು ಸಹಿಯೂ ಇದೆ. ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಜಾತಿಗಣತಿ ವರದಿಯನ್ನು ಓದದೇ ಅವೈಜ್ಞಾನಿಕ ಎಂದು ಹೇಗೆ ಹೇಳುತ್ತೀರಿ. ನಾವು ಸಿದ್ಧಪಡಿಸಿದ ಜಾತಿ ಗಣತಿಯ ವರದಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು

ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ. 154 ಕೋಟಿ ರೂ. ವೆಚ್ಚದಲ್ಲಿ ಈ ಜಾತಿ ಗಣತಿ ವರದಿಯನ್ನು ಸಿದ್ಧಪಡಿಸಲಾಗಿದೆ.

Leave a Comment

Your email address will not be published. Required fields are marked *