ಸಮಗ್ರ ನ್ಯೂಸ್: ಜಾರ್ಖಂಡ್‌ನ ಜಮ್ತಾರ ಜಿಲ್ಲೆಯಲ್ಲಿ ನಿನ್ನೆ ಸಂಜೆ ಭೀಕರ ರೈಲು ದುರಂತ ಸಂಭವಿಸಿದೆ. ಈ ದುರಂತದಲ್ಲಿ ಸ್ಥಳದಲ್ಲೇ 12 ಮಂದಿ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ರೈಲ್ವೆ ಪೊಲೀಸರು ಹಾಗೂ ಸಿಬ್ಬಂದಿಯೂ ಕೂಡಲೇ ಜನರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯನಡೆದಿದೆ ಎಂದು ತಿಳಿದುಬಂದಿದೆ.
ಭಾಗಲ್ಪುರಕ್ಕೆ ತೆರಳುತ್ತಿದ್ದ ಆಂಗ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಹರಡಿದೆ. ಇದರಿಂದಾಗಿ ರೈಲಿನಲ್ಲಿದ್ದ ಪ್ರಯಾಣಿಕರು ಗಲಿಬಿಲಿಗೊಂಡಿದ್ದಾರೆ. ಅಷ್ಟೇ ಅಲ್ಲ, ಆತಂಕದಲ್ಲಿ ನಿಧಾನವಾಗಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಜಿಗಿದಿದ್ದಾರೆ. ಆಗ ಮತ್ತೊಂದು ಕಡೆಯಿಂದ ಬರುತ್ತಿದ್ದ ಝಾಝಾ-ಅಸನೋಲ್ ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
12 ಜನರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ತಾರು ಜನ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಅಪಘಾತ ಸಂಭವಿಸುತ್ತಲೇ ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವ್ಯವಸ್ಥೆಯನ್ನೂ ಮಾಡಲಾಗಿದೆ.