February 2024

ಲೋಕಸಭಾ ಚುನಾವಣೆ/ ದಿನಾಂಕ ಘೋಷಣೆ ಯಾವಾಗ?

ಸಮಗ್ರ ನ್ಯೂಸ್: ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆಯ ಸಾರ್ವತ್ರಿಕ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಮಾ.13ರ ನಂತರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಸಿದ್ಧತೆ ಪರಿಶೀಲನೆ ಸಲುವಾಗಿ ಆಯೋಗ ಈಗಾಗಲೇ ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದು, ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ದಿನಾಂಕ ಘೋಷಿಸಲಾಗುತ್ತದೆ. ಪ್ರಸ್ತುತ ತಮಿಳುನಾಡಿನಲ್ಲಿ ಆಯೋಗ ಪರಿಶೀಲನೆ ಸಭೆ ನಡೆಸುತ್ತಿದ್ದು, ಬಳಿಕ ಉತ್ತರಪ್ರದೇಶ ಹಾಗೂ ಜಮ್ಮು-ಕಾಶ್ಮೀರಕ್ಕೆ ತೆರಳಲಿದೆ. ಈ ಭೇಟಿಗಳು ಮುಗಿದ ಬಳಿಕ ದಿನಾಂಕ ಪ್ರಕಟ ಮಾಡಲಾಗುತ್ತದೆ ಎಂದು ಮೂಲಗಳು […]

ಲೋಕಸಭಾ ಚುನಾವಣೆ/ ದಿನಾಂಕ ಘೋಷಣೆ ಯಾವಾಗ? Read More »

ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು/ ಆಟೋ ಚಾಲಕರ ಉಗ್ರ ಹೋರಾಟದ ಎಚ್ಚರಿಕೆ

ಸಮಗ್ರ ನ್ಯೂಸ್: ಬೈಕ್ ಟ್ಯಾಕ್ಸಿ ವಿರುದ್ಧ ಆಟೋ ಟ್ಯಾಕ್ಸಿ ಚಾಲಕರು ಜಗಳ ಮುಂದುವರಿದಿದ್ದು ಈ ಹಂತದಲ್ಲಿ ಕೆಲವು ಅಗ್ರಿಗೇಟರ್ ಕಂಪನಿಗಳು ಕೇಂದ್ರ ಸರ್ಕಾರದ ಮೊರೆ ಹೋಗಿದ್ದು, ಇದೀಗ ಕೇಂದ್ರ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಡೆಸಲು ಒಪ್ಪಿಗೆ ನೀಡಿದೆ. ವೈಟ್ ಬೋಡ್‍ರ್ನಲ್ಲಿ ಬೈಸಿಕಲ್ ಟ್ಯಾಕ್ಸಿ ನಡೆಸಬಹುದು. ರಾಜ್ಯ ಸಾರಿಗೆ ಇಲಾಖೆ ಅನುಮತಿ ನೀಡಬಹುದು ಎಂದು ಕೇಂದ್ರ ಸಾರಿಗೆ ಇಲಾಖೆ ರಾಜ್ಯ ಸಾರಿಗೆ ಇಲಾಖೆಗೆ ತಿಳಿಸಿದೆ.ಇದು ಆಟೋ ಕ್ಯಾಬ್ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸಾರಿಗೆ ಇಲಾಖೆ ಯಾವುದೇ

ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು/ ಆಟೋ ಚಾಲಕರ ಉಗ್ರ ಹೋರಾಟದ ಎಚ್ಚರಿಕೆ Read More »

ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ| ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕ ತಿರಸ್ಕೃತ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಕ್ಕೆ ಮತ್ತೆ ವಿಧಾನ ಪರಿಷತ್ತಿನಲ್ಲಿ ಇಂದು ಮುಜುಗರ ಉಂಟಾಗಿದೆ. ಇಂದು ಮಂಡಿಸಲಾಗಿದ್ದ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವು ತಿರಸ್ಕೃತಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದರು. ಆ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ಧ್ವನಿ ಮತಕ್ಕೆ ಹಾಕಿದರು. ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕದ ಪರವಾಗಿ 7 ಮತಗಳು, ವಿರೋಧವಾಗಿ 18 ಮತಗಳು ಚಲಾಯಿಸಲಾಯಿತು.

ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ| ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕ ತಿರಸ್ಕೃತ Read More »

ಏಕರೂಪ ನಾಗರಿಕ ಸಂಹಿತೆ/ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ ರದ್ದುಗೊಳಿಸಿದ ಅಸ್ಸಾಂ

ಸಮಗ್ರ ನ್ಯೂಸ್: ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935 ಅನ್ನು ಅಸ್ಸಾಂ ಕ್ಯಾಬಿನೆಟ್ ರದ್ದುಗೊಳಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನದಲ್ಲಿ ಪ್ರಮುಖ ಹೆಜ್ಜೆಯನ್ನು ಇಟ್ಟಿದೆ, ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ಅಂಶಗಳು ಈಗ ವಿಶೇಷ ವಿವಾಹ ಕಾನೂನಿಗೆ ಒಳಪಟ್ಟಿವೆ ಎನ್ನಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಅಸ್ಸಾಂ ಸಚಿವ ಜಯಂತ ಮಲ್ಲಾ ಬರುವಾ, ಅಸ್ಸಾಂ ಕ್ಯಾಬಿನೆಟ್ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಅಸ್ಸಾಂ ವಿಧಾನಸಭೆ ಅಧಿವೇಶನ ಫೆ.28ರವರೆಗೆ

ಏಕರೂಪ ನಾಗರಿಕ ಸಂಹಿತೆ/ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ ರದ್ದುಗೊಳಿಸಿದ ಅಸ್ಸಾಂ Read More »

ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು

ಸಮಗ್ರ ನ್ಯೂಸ್: ದುಬೈನಲ್ಲಿ ರಸ್ತೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಯುವತಿ ಮೃತಪಟ್ಟಿದ್ದಾಳೆ. ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ , ಕೋಟೆಕಾರಿನ ಬೀರಿಯ ಕೆಂಪುಮಣ್ಣು ನಿವಾಸಿ ರಾಜೀವಿ ಅವರ ಏಕೈಕ ಪುತ್ರಿ ವಿದಿಶಾ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ವಿದಿಶಾ ದುಬೈನಲ್ಲಿ ವಾಸವಿದ್ದರು. ಪ್ರತಿ ದಿನ ಕಂಪನಿಗೆ ಕ್ಯಾಬ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಆದರೆ ಫೆಬ್ರವರಿ 22 ರಂದು ಕ್ಯಾಬ್ ತಪ್ಪಿದ ಕಾರಣಕ್ಕೆ ತಮ್ಮದೇ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ ಕಾರಿನ ನಿಯಂತ್ರಣ

ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು Read More »

ಸುಳ್ಯ: ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ವಿಜ್ಞಾನ ಮತ್ತು ಪ್ರಪಂಚ ಜ್ಞಾನ ಇಲಾಖೆ ನೀಡುವ ಇನ್ಸ್ಪೈರ್ ಅವಾರ್ಡ್ ಗೆ ಅಜಿತ್ ಕೃಷ್ಣ ಕೆ. ಆಯ್ಕೆ. ಇವರು ಸುಳ್ಯ ಪಿ.ಎಲ್.ಡಿ. ಬ್ಯಾಂಕ್ ಇಲ್ಲಿನ ಕ್ಷೇತ್ರ ಅಧಿಕಾರಿಯಾಗಿರುವ ದಾಮೋದರ ಎಂ. ಮತ್ತು ಶೀಲಾವತಿ ದಂಪತಿಗಳ ಪುತ್ರ. ಇವರಿಗೆ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರ ಸಹಕಾರದಲ್ಲಿ ವಿಜ್ಞಾನ ಶಿಕ್ಷಕಿ ಪೂರ್ಣಿಮಾ ಮಾರ್ಗದರ್ಶನ ನೀಡಿದ್ದಾರೆ.

ಸುಳ್ಯ: ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ Read More »

ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ/ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‍ಗೆ ಕೋರ್ಟ್ ಸಮನ್ಸ್

ಸಮಗ್ರ ನ್ಯೂಸ್: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆಯ ಚುನಾವಣೆಯ ವೇಳೆ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್‍ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ದೂರಿನ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40%

ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ/ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‍ಗೆ ಕೋರ್ಟ್ ಸಮನ್ಸ್ Read More »

ಬೆಂಗಳೂರಿಗರಿಗೆ ಸಿಹಿ ಸುದ್ದಿ/ ಬೆಳಿಗ್ಗೆ ಐದರಿಂದ ಓಡಾಡಲಿದೆ ಮೆಟ್ರೋ

ಸಮಗ್ರ ನ್ಯೂಸ್: ಮೆಟ್ರೋ ರೈಲು ನಿಗಮವು ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಪೀಕ್ ಅವರ್ ಗಳಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಜನಸಂದಣಿ ಹೆಚ್ಚಾದ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ರೈಲು ಸೇವೆ ಕೂಡ ಆರಂಭ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ರೈಲುಗಳನ್ನು ಸಂಚರಿಸಲು ನಿರ್ಧಾರ ಮಾಡಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ರೈಲು ಸೇವೆ ಕೂಡ ಆರಂಭವಾಗುತ್ತಿದ್ದು, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲು

ಬೆಂಗಳೂರಿಗರಿಗೆ ಸಿಹಿ ಸುದ್ದಿ/ ಬೆಳಿಗ್ಗೆ ಐದರಿಂದ ಓಡಾಡಲಿದೆ ಮೆಟ್ರೋ Read More »

ಮಾಜಿ ಲವರ್ ಕಾಟ ತಾಳಲಾರದೆ ನಿಶ್ಚಿತಾರ್ಥವಾಗಿದ್ದ ಯುವತಿ ಸಾವು

ಸಮಗ್ರ ನ್ಯೂಸ್: ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಪ್ರಿಯಕರ ಪಕ್ಕದ ಮನೆಯಲ್ಲಿದ್ದು ನಿರಂತರ ಕಾಟ ಕೊಡುತ್ತಿದ್ದ, ಅವನ ಕಾಟ ತಾಳಲಾರದೆ, ನಿಶ್ಚಿತಾರ್ಥವಾಗಿದ್ದ ಚಂದ್ರಕಲಾ (19)ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಿಗಣಿ ಸಮೀಪದ ನಂಜಾಪುರದಲ್ಲಿ ಮೊನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಗಣಿ ಸಮೀಪದ ನಂಜಾಪುರದ ನಿವಾಸಿಯಾಗಿದ್ದ ಮೃತ ಚಂದ್ರಕಲಾ ಹಾಗೂ ಆರೋಪಿ ಅರುಣ್ ಕುಮಾರ್​ ಪರಸ್ಪರ ಪ್ರೀಸುತ್ತಿದ್ದರಂತೆ. ಬಳಿಕ ಚಂದ್ರಕಲಾ ಮದುವೆ ಪ್ರಸ್ತಾಪ ಮಾಡಿದ್ದಾಳೆ. ಇಲ್ಲ

ಮಾಜಿ ಲವರ್ ಕಾಟ ತಾಳಲಾರದೆ ನಿಶ್ಚಿತಾರ್ಥವಾಗಿದ್ದ ಯುವತಿ ಸಾವು Read More »

ಸುಳ್ಯ: ಫೆ.24, ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ 22ನೇ ವರ್ಷದ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವಗಳ ನೇಮೋತ್ಸವ

ಸಮಗ್ರ ನ್ಯೂಸ್: ಪೇರಾಲು ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ ಫೆ. 24ನೇ ಶನಿವಾರದಂದು 22ನೇ ವರ್ಷದ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವಗಳನೇಮೋತ್ಸವ ಕಾರ್ಯಕ್ರಮ ನಡೆಯಲಿದೆ. ಫೆ. 24ರಂದು ಬೆಳಗ್ಗೆ 8.00 ಕ್ಕೆ ಗಣಪತಿ ಹವನ ಮತ್ತು ನಾಗಪೂಜೆ, 10.00 ರಿಂದ ಶನಿಪೂಜೆ, ಹೂವಿನ ಪೂಜೆ, ಕಲಶ ಸ್ನಾನ, 10.00ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 12.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 1.00ಕ್ಕೆ ಅನ್ನಸಂತರ್ಪಣೆ, ಸಂಜೆ 3.00ಕ್ಕೆ ಗುಳಿಗನ ಕೋಲ, ಪ್ರಸಾರ ವಿತರಣೆ, ರಾತ್ರಿ

ಸುಳ್ಯ: ಫೆ.24, ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ 22ನೇ ವರ್ಷದ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವಗಳ ನೇಮೋತ್ಸವ Read More »