February 2024

ಚುನಾವಣೆಗೆ ಸಂಬಂಧಿಸಿದ ಸಭೆ/ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ

ಸಮಗ್ರ ನ್ಯೂಸ್: ಚುನಾವಣಾ ಹಿನ್ನಲೆಯಲ್ಲಿ ದೆಹಲಿಯಲ್ಲಿ ಸಭೆ ನಡೆಯಲಿರುವ ಕಾರಣ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ ನೀಡಲಾಗಿದೆ. ಮಾರ್ಚ್ 5 ರಿಂದ ಮತ್ತೆ ಯಾತ್ರೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದ ಸಭೆಗಳಲ್ಲಿ, ರಾಹುಲ್ ಗಾಂಧಿ ಸಭೆಯಲ್ಲಿ ಭಾಗಿಯಾಗಬೇಕಿದೆ. ಈ ಕಾರಣದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಾತ್ಕಾಲಿಕ ವಿರಾಮ ನೀಡಲಾಗಿದೆ.

ಚುನಾವಣೆಗೆ ಸಂಬಂಧಿಸಿದ ಸಭೆ/ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ Read More »

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ/ ಸರ್ಕಾರದ ಅಧಿಕೃತ ಆದೇಶ

ಸಮಗ್ರ ನ್ಯೂಸ್; ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಇನ್ನು ಮುಂದೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕøತಿ ಸಚಿವಾಲಯವು ನಿರ್ದೇಶನವನ್ನು ಹೊರಡಿಸಿದ್ದು, ನಾಡಗೀತೆ ಹಾಡುವುದಕ್ಕೆ ಖಾಸಗಿ ಶಾಲೆಗಳಿಗೆ ಸರ್ಕಾರ ವಿನಾಯಿತಿ ನೀಡಿದೆ. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬಹುದು ಎಂದು ಆದೇಶ ನೀಡಲಾಗಿದೆ. ಈ ಹಿಂದೆ, ಎಲ್ಲಾ ಶಾಲೆಗಳು ತಮ್ಮ ದೈನಂದಿನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲು ನಾಡಗೀತೆಯನ್ನು ಹಾಡಬೇಕಾಗಿತ್ತು. ಕಚೇರಿಗಳು, ಇಲಾಖೆಗಳು, ಅಧಿಕಾರಿಗಳು

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ/ ಸರ್ಕಾರದ ಅಧಿಕೃತ ಆದೇಶ Read More »

ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​

ಸಮಗ್ರ ನ್ಯೂಸ್: ರಾಮನಗರದ 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಖಂಡಿಸಿ ವಕೀಲರು ಅಹೋ ರಾತ್ರಿ ಪ್ರತಿಭಟನೆ ನಡೆಸಿ ಇಂದಿಗೆ ಮೂರನೇ ದಿನಕ್ಕೂ ಕಾಲಿಡುತ್ತಿದೆ.ಈ ಪ್ರಕರಣ ವಿಧಾನಸಭಾ ಕಲಾಪದಲ್ಲೂ ಚರ್ಚೆಯಾಗುತ್ತಿದೆ. ಇನ್ನು ಮತ್ತೊಂದೆಡೆ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಲಾಗಿದೆ. 40 ವಕೀಲರ ವಿರುದ್ಧ ಐಜೂರು ಪೊಲೀಸ್ ಠಾಣೆ ಪಿಎಸ್​ಐ ಆಗಿದ್ದ ತನ್ವೀರ್ ಹುಸೇನ್​ ಅವರು ಎಫ್​ಐಆರ್​ ದಾಖಲಿಸಿದ್ದರು. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರ ಪ್ರತಿಭಟನೆ ಆರಂಭಿಸಿದರು. ವಕೀಲರಿಗೆ ಪ್ರತಿಪಕ್ಷ

ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​ Read More »

ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ| ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಈ ಸಂಬಂಧ ಮೃತ ಸೌಜನ್ಯ ತಂದೆಯೂ ಆದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್‌.ಬಾಲಕೃಷ್ಣ,

ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ‌ ವಿಚಾರಣೆ| ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ Read More »

ಸುಪ್ರೀಂಕೋರ್ಟ್ ‌ನ‌ ಹಿರಿಯ ವಕೀಲ ಫಾಲಿ‌ ಎಸ್. ನಾರಿಮನ್ ವಿಧಿವಶ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ (95)ಅವರು ಬುಧವಾರ(ಫೆ.21) ಬೆಳಗ್ಗೆ ದೆಹಲಿಯ ತಮ್ಮ ಸ್ವಗೃಹದಲ್ಲಿ ನಿಧನರಾದರು. 1950ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲಿಕೆ ಆರಂಭಿಸಿದ್ದ ಅವರು, 70 ವರ್ಷಕ್ಕೂ ಹೆಚ್ಚಿನ ಕಾಲ ವಕೀಲ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ದೇಶದ ಪ್ರಮುಖ ವಕೀಲರಲ್ಲಿ ಓರ್ವರಾಗಿದ್ದ ನಾರಿಮನ್ ಅವರು, 1972ರಲ್ಲಿ ದೇಶದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿಯೂ ಕಾರ್ಯನಿರ್ವಹಿಸಿದ್ದರು. 1991–2010ರ ವರೆಗೆ ಭಾರತದ ಬಾರ್ ಒಕ್ಕೂಟದ ಅಧ್ಯಕ್ಷರಾಗಿದ್ದ ನಾರಿಮನ್, 1989–2005ರವರೆಗೆ ಪ್ಯಾರಿಸ್ ನಲ್ಲಿ

ಸುಪ್ರೀಂಕೋರ್ಟ್ ‌ನ‌ ಹಿರಿಯ ವಕೀಲ ಫಾಲಿ‌ ಎಸ್. ನಾರಿಮನ್ ವಿಧಿವಶ Read More »

ವಿರಾಟ್ ಕೊಹ್ಲಿ ದಂಪತಿಗೆ ಗಂಡುಮಗು ಜನನ

ಸಮಗ್ರ ನ್ಯೂಸ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂದೆಯಾಗಿದ್ದು, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವಾಮಿಕಾಳ ಪುಟ್ಟ ಸಹೋದರ ಈ ಲೋಕಕ್ಕೆ ಬಂದಿದ್ದಾನೆ” ಎಂದು ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ. ತಮ್ಮ ಮಗುವಿನ ಹೆಸರನ್ನು ಅಕಾಯ್ ಎಂದು ಬಹಿರಂಗಪಡಿಸಿದ್ದಾರೆ. “ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಕೋರುತ್ತೇವೆ. ಈ ಸಮಯದಲ್ಲಿ ದಯವಿಟ್ಟು ನಮ್ಮ ಗೌಪ್ಯತೆಯನ್ನ ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ”

ವಿರಾಟ್ ಕೊಹ್ಲಿ ದಂಪತಿಗೆ ಗಂಡುಮಗು ಜನನ Read More »

ಉದ್ಯೋಗ ಕೊಡಿಸೋದಾಗಿ ನಂಬಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್

ಸಮಗ್ರ ನ್ಯೂಸ್: ಇತ್ತೀಚೆಗೆ ನಿರುದ್ಯೋಗಿ‌ಗಳು ಹೆಚ್ಚು. ಕೆಲಸಕ್ಕಾಗಿ ಹುಡುಕಾಟ ನಡೆಸುವ ಯುವಕರನ್ನೇ ಟಾರ್ಗೆಟ್ ಮಾಡಿ ಉದ್ಯೋಗ ಕೊಡಿಸೋದಾಗಿ ಹೇಳಿ ವಂಚನೆ ಮಾಡುವ ಘಟನೆ ನಡೆಯುತ್ತಿರುತ್ತದೆ. ಇದೇ ವಿಚಾರವಾಗಿ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಹಾಗೂ ಮಧು ಜೋಡಿ, ಕೆಲಸಕ್ಕಾಗಿ ಅಲೆಯುವ ಯುವಕರನ್ನು ಹುಡುಕಿ ಸರ್ಕಾರಿ ನೌಕರಿ ಕೊಡಿಸೋದಾಗಿ ಕಾಗೆ ಹಾರಿಸುತ್ತಿದ್ದರು. ನಮಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯ ಇದೆ. ಅಲ್ಲದೆ ವಿವಿಧ‌ ಇಲಾಖೆಯ ಮುಖ್ಯಸ್ಥರು ಪರಿಚಯ ಇದ್ದಾರೆ. ಖಾಲಿ‌ ಇರುವ ಸರ್ಕಾರಿ‌ ಕೆಲಸ ಕೊಡಿಸೋದಾಗಿ‌ ಹೇಳಿ

ಉದ್ಯೋಗ ಕೊಡಿಸೋದಾಗಿ ನಂಬಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್ Read More »

ಅಕ್ರಮ ಆಮದು ಪರಿಣಾಮ| ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ

ಸಮಗ್ರ ನ್ಯೂಸ್: ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಮತ್ತೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಭೀತಿ ಎದುರಾಗಿದೆ. ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಕರಾವಳಿ ಮಾರುಕಟ್ಟೆಗಳಿಗೆ ಆಗಮಿಸುತ್ತಿರುವುದು ಈ ಭೀತಿಗೆ ಕಾರಣವಾಗಿದೆ. ಅತ್ಯಂತ ಹೆಚ್ಚು ಗುಣಮಟ್ಟದ ಅಡಿಕೆ ಬೆಳೆಯುವ ಪ್ರದೇಶವಾದ ಕರಾವಳಿ ಭಾಗದ ಅಡಿಕೆಗೆ ಉತ್ತರ ಭಾರತದ ಹಲವೆಡೆ ಭಾರೀ ಬೇಡಿಕೆಯಿದೆ. ಈ ಬೇಡಿಕೆಗಳಿಗೆ ಅನುಗುಣವಾಗಿ ಕರಾವಳಿ ಭಾಗದ ಕೃಷಿಕರು ಅಡಿಕೆ ಬೆಳೆಯನ್ನು ಬೆಳೆಯುತ್ತಿದ್ದು, ಕೊರೊನಾ ಲಾಕ್ ಡೌನ್ ಬಳಿಕ ಅಡಿಕೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಧಾರಣೆ

ಅಕ್ರಮ ಆಮದು ಪರಿಣಾಮ| ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ Read More »

ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ತಾಯಿ ಮಕ್ಕಳು| ಮಗು ಮೃತ್ಯು

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ರಸ್ತೆ ದಾಟುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಆಂಧ್ರ ಸಾರಿಗೆ ಬಸ್ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮತ್ತೊಂದು ಮಗು ಹಾಗೂ ತಾಯಿ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ತಾಯಿ ಮಕ್ಕಳು| ಮಗು ಮೃತ್ಯು Read More »

ಗಡಿಭಾಗದಲ್ಲಿನ ಆನೆದಾಳಿಗೆ ಕೇರಳದಿಂದ ಪರಿಹಾರ ತರಿಸಲು ಸಾಧ್ಯವೇ? – ಡಿ.ವಿ ಸದಾನಂದ ಗೌಡ ಪ್ರಶ್ನೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡುತ್ತಿದ್ದು, ಇದಕ್ಕೆ ಕೇರಳ ಸರಕಾರದಿಂದ ಪರಿಹಾರ ತರಿಸಬಹುದೇ ಎಂದು ಕಾಂಗ್ರೆಸ್‌ ಅನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡಿ ಸಾವಿರಾರು ಎಕರೆ ಕೃಷಿ ನಾಶ ಮಾಡುತ್ತಿವೆ. ಈ ಆನೆಗಳು ಕೇರಳ ಭಾಗದಿಂದ ಬರುತ್ತಿರುವುದರಿಂದ ಪರಿಹಾರವನ್ನು ಕೇರಳ ಸರಕಾರದಿಂದ ತರಿಸಿ

ಗಡಿಭಾಗದಲ್ಲಿನ ಆನೆದಾಳಿಗೆ ಕೇರಳದಿಂದ ಪರಿಹಾರ ತರಿಸಲು ಸಾಧ್ಯವೇ? – ಡಿ.ವಿ ಸದಾನಂದ ಗೌಡ ಪ್ರಶ್ನೆ Read More »