February 2024

ಸುಳ್ಯ: ಹೀಗೊಂದು ಗ್ಯಾಸ್ ಸಿಲಿಂಡರ್ ಕಳ್ಳತನ

ಸಮಗ್ರ ನ್ಯೂಸ್: ಮನೆಯ ಹಿಂಬದಿ ಗ್ಯಾಸ್‌ ಒಲೆಗೆ ಇರಿಸಲಾಗಿದ್ದ ಗ್ಯಾಸ್‌ ಸಿಲಿಂಡರನ್ನು ಕಳವುಗೈದು ತಾನು ತಂದ ಖಾಲಿ ಜಾಡಿಯನ್ನು ಅಲ್ಲಿರಿಸಿ ಹೋಗಿರುವ ಘಟನೆ ಸುಳ್ಯದ ಜಯನಗರದಲ್ಲಿ ಫೆ. 18ರ ರಾತ್ರಿ ಬೆಳಕಿಗೆ ಬಂದಿದೆ. ಜಯನಗರ ನಿವಾಸಿ ದಿ| ನೌಶಾದ್‌ ಅವರ ಮನೆಯ ಹಿಂಬದಿಯಲ್ಲಿ ಗ್ಯಾಸ್‌ ಒಲೆಗೆ ಅಳವಡಿಸಲಾಗಿದ್ದ ಗ್ಯಾಸ್‌ ತುಂಬಿದ್ದ ಸಿಲಿಂಡರ್‌ ಕಳ್ಳತನವಾಗಿದೆ. ಮನೆಯಲ್ಲಿ ಮಹಿಳೆ ಮತ್ತು ಮಕ್ಕಳು ಮಾತ್ರ ಇದ್ದು ಅವರು ಮನೆಯ ಒಳಗೆ ಇದ್ದಾಗಲೇ ಕಳ್ಳ ಇಂಡೇನ್‌ ಕಂಪೆನಿಯ ಸಿಲಿಂಡರನ್ನು ಇರಿಸಿ ನೂತನ ಎಚ್‌ಪಿ […]

ಸುಳ್ಯ: ಹೀಗೊಂದು ಗ್ಯಾಸ್ ಸಿಲಿಂಡರ್ ಕಳ್ಳತನ Read More »

ಆನೆದಾಳಿಯಿಂದ ಕೇರಳದಲ್ಲಿ ಕೊಲ್ಲಲ್ಪಟ್ಟ ವ್ಯಕ್ತಿಗೆ ಕರ್ನಾಟಕದಿಂದ ಪರಿಹಾರ| ಬಿಜೆಪಿಯಿಂದ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ ₹15 ಲಕ್ಷವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್‌ ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್‌ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ‘ಬರಗಾಲದಿಂದ ರಾಜ್ಯದಾದ್ಯಂತ

ಆನೆದಾಳಿಯಿಂದ ಕೇರಳದಲ್ಲಿ ಕೊಲ್ಲಲ್ಪಟ್ಟ ವ್ಯಕ್ತಿಗೆ ಕರ್ನಾಟಕದಿಂದ ಪರಿಹಾರ| ಬಿಜೆಪಿಯಿಂದ ಆಕ್ರೋಶ Read More »

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿನಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 836 ಅಸಿಸ್ಟೆಂಟ್​ ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 21, 2024 ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮತ್ತು ಆಫ್​​ಲೈನ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ,

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿನಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ Read More »

ಬನ್ನೇರುಘಟ್ಟದಲ್ಲಿ ದೇಶದ ಅತಿದೊಡ್ಡ ಚಿರತೆ ಸಫಾರಿ ಶೀಘ್ರವೇ ಆರಂಭ

ಸಮಗ್ರ ನ್ಯೂಸ್: ದೇಶದ ಅತಿದೊಡ್ಡ ಹಾಗೂ ರಾಜ್ಯದ ಮೊದಲ ಚಿರತೆ ಸಫಾರಿ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಶೀಘ್ರವೇ ಆರಂಭವಾಗಲಿದೆ. ಈಗಾಗಲೇ ಇರುವ ಹುಲಿ ಮತ್ತು ಸಿಂಹ ಸಫಾರಿ ಮಾದರಿಯಲ್ಲಿಯೇ ಚಿರತೆ ಸಫಾರಿಯನ್ನು ಆರಂಭಿಸಲಾಗುತ್ತದೆ. ಚಿರತೆ ಸಫಾರಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದ್ದು, ಎಲ್ಲವೂ ಅಂದುಕೊಂಡಂತೆಯೇ ನಡೆದರೆ ಇನ್ನೇನು ಒಂದೂವರೆ ತಿಂಗಳಲ್ಲಿಯೇ ಸಫಾರಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಬೇರೆ ಕಡೆಗಳಿಂದ ಬಂದ ಚಿರತೆಗಳು ವಾತಾವರಣಕ್ಕೆ, ಸಹಬಾಳ್ವೆಗೆ ಹೊಂದಿಕೊಳ್ಳಲು ಸಮಯ ಹಾಗೂ ತರಬೇತಿ

ಬನ್ನೇರುಘಟ್ಟದಲ್ಲಿ ದೇಶದ ಅತಿದೊಡ್ಡ ಚಿರತೆ ಸಫಾರಿ ಶೀಘ್ರವೇ ಆರಂಭ Read More »

ಮತದಾನ ಜಾಗೃತಿ/ ಶುಭ್‍ಮನ್ ಗಿಲ್ ಪಂಜಾಬ್ ರಾಜ್ಯ ಐಕಾನ್ ಆಗಿ ಆಯ್ಕೆ

ಸಮಗ್ರ ನ್ಯೂಸ್: ಮತದಾರರಲ್ಲಿ ಜಾಗೃತಿ ಮೂಡಿಸಲು, ಪಂಜಾಬ್ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಭಾರತೀಯ ಕ್ರಿಕೆಟಿಗ ಶುಭ್‍ಮನ್ ಗಿಲ್ ಅವರನ್ನು ರಾಜ್ಯ ಐಕಾನ್ ಎಂದು ಘೋಷಿಸಿದೆ. ಲೋಕಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಚುನಾವಣೆಯಲ್ಲಿ ಶೇ. 70 ರಷ್ಟು ಮತದಾನವನ್ನು ಖಚಿತಪಡಿಸಿಕೊಳ್ಳಲು ಗಿಲ್ ವಿವಿಧ ಅಭಿಯಾನಗಳಲ್ಲಿ ಭಾಗವಹಿಸುತ್ತಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಸಿಬಿನ್ ಸಿ ಅವರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ರೀಡಾ ಉತ್ಸಾಹಿಗಳಲ್ಲಿ ವಿಶೇಷವಾಗಿ ಯುವಕರಲ್ಲಿ ಜನಪ್ರಿಯರಾಗಿರುವ ಪಂಜಾಬ್ ನಿವಾಸಿ ಗಿಲ್ ಅವರನ್ನು ಚುನಾವಣೆಗೆ ರಾಜ್ಯ ಐಕಾನ್” ಆಗಿ

ಮತದಾನ ಜಾಗೃತಿ/ ಶುಭ್‍ಮನ್ ಗಿಲ್ ಪಂಜಾಬ್ ರಾಜ್ಯ ಐಕಾನ್ ಆಗಿ ಆಯ್ಕೆ Read More »

ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು ಸರಕಾರಕ್ಕೆ ಹಿಂತಿರುಗಿಸಲು ಸೂಚನೆ/ ಸರಕಾರದ ಅಧಿಸೂಚನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ

ಸಮಗ್ರ ನ್ಯೂಸ್: ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು ಮೂರು ತಿಂಗಳ ಒಳಗೆ ಹಿಂತಿರುಗಿಸಲು ಸರಕಾರ ಹೊರಡಿಸಿರುವ ಅಧಿಸೂಚನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ವನ್ಯಜೀವಿಗಳ ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಒಪ್ಪಿಸಲು ನಿಯಮಾವಳಿಗಳನ್ನು ರಚಿಸಿ ಅದೇಶ ಹೊರಡಿಸಲಾಗಿತ್ತು. ಕೊಡಗಿನವರಾದ ರಂಜಿ ಪೂಣಚ್ಚ ಮತ್ತು ಕುಟ್ಟಪ್ಪ ಈ ಅಧಿಸೂಚನೆಯ ಅಧಿನಿಯಮಗಳ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ

ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು ಸರಕಾರಕ್ಕೆ ಹಿಂತಿರುಗಿಸಲು ಸೂಚನೆ/ ಸರಕಾರದ ಅಧಿಸೂಚನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ Read More »

6 ಟ್ರಂಕ್ ಗಳಲ್ಲಿ ತಮಿಳುನಾಡಿಗೆ ಮರಳಲಿದೆ ಜಯಲಲಿತಾ ಆಭರಣಗಳು

ಸಮಗ್ರ ನ್ಯೂಸ್: ಜಯಲಲಿತಾರ ಆಭರಣಗಳು ತಮಿಳುನಾಡಿಗೆ ಮರಳುತ್ತಿದೆ. ಬೆಂಗಳೂರಿನ ವಿಶೇಷ ಕೋರ್ಟ್ 6 ಟ್ರಂಕ್ ಗಳೊಂದಿಗೆ ಬೆಂಗಳೂರಿಗೆ ಬರುವಂತೆ ತಮಿಳುನಾಡಿನ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕರ್ನಾಟಕದ ಮೇಲುಕೋಟೆಯಲ್ಲಿ ಜನಿಸಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರು ಆದಾಯ ಮೀರಿದ‌ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದರು. ವಿಚಾರಣೆ ಬೆಂಗಳೂರಿನಲ್ಲಿ ನಡೆದಿದ್ದರಿಂದ ಜಯಲಲಿತಾರಿಂದ ಆಭರಣ, ಸೀರೆ ಮತ್ತಿತರ ವಸ್ತುಗಳೂ ಬೆಂಗಳೂರಿನ ಕೋರ್ಟ್ ಸುಪರ್ದಿಯಲ್ಲೇ ಇದ್ದವು.‌ ಇದೀಗ ಈ ಆಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಕೋರ್ಟ್ ನಿರ್ಧರಿಸಿದೆ. ದಿ. ಜಯಲಲಿತಾ

6 ಟ್ರಂಕ್ ಗಳಲ್ಲಿ ತಮಿಳುನಾಡಿಗೆ ಮರಳಲಿದೆ ಜಯಲಲಿತಾ ಆಭರಣಗಳು Read More »

ಜ್ಞಾನದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಬರಹ/ ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

ಸಮಗ್ರ ಸಮಾಚಾರ: ಕುವೆಂಪು ಅವರ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಬರಹವನ್ನು ತೆಗೆದು ಹಾಕಿ ಜ್ಞಾನದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎನ್ನುವ ಬದಲಾವಣೆಯನ್ನು ವಿಜಯಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಮಾಡಲಾಗಿತ್ತು. ಇದರಿಂದಾಗಿ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆದಿದ್ದು, ಇದೀಗ ಸಮಾಜ ಕಲ್ಯಾಣ ಇಲಾಖೆಯು ಕುವೆಂಪು ಘೋಷವಾಕ್ಯ ಬದಲಾಯಿಸಲು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರ ಆದೇಶದ ಮೇಲೆ ಈ ರೀತಿ ಬದಲಾವಣೆ ಮಾಡಿದ್ದೇವೆ. ಆದರೆ ಅವರು ಟೆಲಿಗ್ರಾಂನಲ್ಲಿ

ಜ್ಞಾನದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಬರಹ/ ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ Read More »

ಮೈಸೂರಿನ ಹುಲಿಗೆ ಮಂಗಳೂರಿನಲ್ಲಿ ಪೊಲೀಸರ ಕಾಟ| ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ನೋಟೀಸ್ ಜಾರಿ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ನಡೆಯುವ ಡಿವೈಎಫ್‌ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ತೆರವುಗೊಳಿಸಬೇಕು ಎಂದು ಕೊಣಾಜೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕಟೌಟ್ ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ‘ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ. ಹರೇಕಳ ಕಚೇರಿ ಬಳಿ ಕಾರ್ಯಕರ್ತರು

ಮೈಸೂರಿನ ಹುಲಿಗೆ ಮಂಗಳೂರಿನಲ್ಲಿ ಪೊಲೀಸರ ಕಾಟ| ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ನೋಟೀಸ್ ಜಾರಿ Read More »

ಕುಕ್ಕೆ ಸುಬ್ರಹ್ಮಣ್ಯ: ಬಸ್ – ಬೈಕ್ ನಡುವೆ ಅಪಘಾತ| ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಯಲ್ಲಿ ಸಾವು

ಸಮಗ್ರ ನ್ಯೂಸ್: ಬೈಕ್‌ಗೆ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್‌ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಸೋಮವಾರ ಸಂಭವಿಸಿದೆ. ಮೃತರನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್‌ ಆಗಿದ್ದ ವಾಸುದೇವ ಗೌಡ (52) ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಹಾಗೂ ನಾಲ್ವರು ಸಹೋದರರನ್ನು ಅಗಲಿದ್ದಾರೆ. ಬಸ್‌ ಓವರ್‌ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬಂದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ

ಕುಕ್ಕೆ ಸುಬ್ರಹ್ಮಣ್ಯ: ಬಸ್ – ಬೈಕ್ ನಡುವೆ ಅಪಘಾತ| ಗಂಭೀರ ಗಾಯಗೊಂಡ ಸವಾರ ಆಸ್ಪತ್ರೆಯಲ್ಲಿ ಸಾವು Read More »