ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್ ಮಾಡುವವರೆ ಎಚ್ಚರ…!
ಸಮಗ್ರ ನ್ಯೂಸ್: ಬೆಂಗಳೂರಿನ ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್ ಮಾಡುತ್ತಿದ್ದವರಿಗೆ ಇಂದು ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ಮೆಜೆಸ್ಟಿಕ್ ಸುತ್ತಲೂ ದಿನ ಸುಮಾರು ವಾಹನಗಳು ನಿಲ್ಲುತ್ತದೆ. ಇದನ್ನು ಗಮನಿಸಿದ ಟ್ರಾಫಿಕ್ ಪೊಲೀಸರು ಬೆಳಗ್ಗೆ ಯಿಂದ ಮಧ್ಯಾಹ್ನದವರೆಗೆ ಕಾರ್ಯಾಚರಣೆ ಮಾಡಿ, ಒಟ್ಟು 456 ಪ್ರಕರಣ ದಾಖಲಿಸಿ 2,54,500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ವಾಹನಗಳ ಪಾರ್ಕಿಂಗ್‌ನಿಂದ ಟ್ರಾಫಿಕ್ ಹೆಚ್ಚಾಗುತ್ತಿತ್ತು. ಮುಂದಿನ ದಿನಗಳಲ್ಲೂ ಕಾರ್ಯಾಚರಣೆಗೆ ಟ್ರಾಫಿಕ್ ಪೊಲೀಸರಿಂದ ಚಿಂತನೆ ನಡೆಸಲಾಗುತ್ತಿದೆ.
ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್ ಮಾಡುವವರೆ ಎಚ್ಚರ…! Read More »