February 2024

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಲವ್ವಿಡವ್ವಿ|ಮನನೊಂದು ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ತಾನು ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಮೃತನ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಗನ ಅತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ. ದಿವ್ಯಾ ಎಂಬಾಕೆಗೆ ಈ ಹಿಂದೆ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿತ್ತು. ಬಳಿಕ ಆಕೆ ವಿಚ್ಚೇದನ ಪಡೆದಿದ್ದಳು. ವಿಚ್ಚೇದನ ಪಡೆದ ಸ್ವಲ್ಪ ದಿನದಲ್ಲೇ […]

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಲವ್ವಿಡವ್ವಿ|ಮನನೊಂದು ಯುವಕ ಆತ್ಮಹತ್ಯೆ Read More »

ವಿಟ್ಲ: ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ| ಕೋಟ್ಯಾಂತರ ರೂ. ನಗದು, ಚಿನ್ನಾಭರಣ ದೋಚಿದ ಕಳ್ಳರು

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಿಟ್ಲ ಕರ್ಣಾಟಕ ಬ್ಯಾಂಕಿನ ಅಡ್ಯನಡ್ಕ ಶಾಖೆಯಲ್ಲಿ ಗುರುವಾರ ಭಾರೀ ಕಳ್ಳತನ ನಡೆದಿದ್ದು, ಕೋಟ್ಯಾಂತರ ರೂ. ಮೌಲ್ಯದ ನಗ- ನಗದನ್ನು ದೋಚಿದ ಘಟನೆ ನಡೆದಿದೆ. ಸುಮಾರು 2 -3 ಕೋಟಿ ರೂ. ನಗದು ಮತ್ತು ಬಂಗಾರ ಕಳ್ಳರ ಪಾಲಾಗಿದೆ. ಕೃತ್ಯವು ಫೆ. 7ರ ಬುಧವಾರ ರಾತ್ರಿ 2.30 ರಿಂದ ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕರ್ಣಾಟಕ ಬ್ಯಾಂಕಿನ ಅಡ್ಯನಡ್ಕ ಶಾಖೆಯು ಕಲ್ಲಡ್ಕ ಕಾಂಞಂಗಾಡ್‌ ಅಂತಾರಾಜ್ಯ ಹೆದ್ದಾರಿಯ ಅಂಚಿನಲ್ಲಿದೆ.

ವಿಟ್ಲ: ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ| ಕೋಟ್ಯಾಂತರ ರೂ. ನಗದು, ಚಿನ್ನಾಭರಣ ದೋಚಿದ ಕಳ್ಳರು Read More »

ಕೊಪ್ಪಳದ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್ ಕಾಟ|ದೇವಸ್ಥಾನದಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ಕೊಪ್ಪಳದ ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್ ಕಾಟ ಜೋರಾಗಿದ್ದು, ವ್ಯಾಪಕವಾಗಿ ಹರಡಿದೆ, ಜ್ವರ ಮತ್ತು ಮೈಕೈ ನೋವಿನಿಂದ ಜನರು ನರಳಾಡುತ್ತಿದ್ದಾರೆ. ಸ್ಥಳಕ್ಕೆ ಕುಷ್ಟಗಿ ತಹಶೀಲ್ದಾರ್ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ದೇವಸ್ಥಾನದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಎಲ್ಲಾ ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುತ್ತೇವೆ ಎಂದು ತಹಶೀಲ್ದಾರ್ ಹೇಳಿದ್ದಾರೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್​ತಂಗಡಿ, ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮಕ್ಕೆ ಭೇಟಿ ಕೊಡಲು ಜಿಲ್ಲಾಧಿಕಾರಿ

ಕೊಪ್ಪಳದ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್ ಕಾಟ|ದೇವಸ್ಥಾನದಲ್ಲಿ ಚಿಕಿತ್ಸೆ Read More »

ಕೆರಗೋಡು ಹನುಮಧ್ವಜ ತೆರವು ವಿವಾದ/ ನಾಳೆ ಬಂದ್ ಆಗುತ್ತಾ ಮಂಡ್ಯ?

ಸಮಗ್ರ ನ್ಯೂಸ್: ಕೆರೆಗೋಡು ಹನುಮಧ್ವಜ ತೆರವು ವಿವಾದ ಹಾಗೆಯೇ ಮುಂದುವರಿದಿದ್ದು, ಫೆ. 9ಕ್ಕೆ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮ ಭಜನಾ ಮಂಡಳಿ ಮಂಡ್ಯ ಜಿಲ್ಲೆ ಹಾಗೂ ಕೆರೆಗೋಡು ಬಂದ್‍ಗೆ ಕರೆ ನೀಡಿದೆ. ಜಿಲ್ಲಾಡಳಿತ ಬಂದ್ ಮಾಡದಂತೆ ಮನವಿ ಮಾಡಿದರೂ ಕೂಡ ಮಣೆ ಹಾಕದ ಹಿಂದೂಪರ ಸಂಘಟನೆಗಳಿಗೆ, ಬಜರಂಗಸೇನೆ ಸೇರಿ ಹಲವು ಸಂಘಟನೆಗಳಿಂದ ಬಂದ್ ಗೆ ಬೆಂಬಲ ಸೂಚಿಸಲಾಗಿದೆ. ಫೆ. 7ರಂದು ಕರೆ ನೀಡಲಾಗಿದ್ದ ಬಂದ್ ಅನ್ನು ಮಂಡ್ಯ ಜಿಲ್ಲಾಡಳಿತದ ಮನವಿ ಮೇರೆಗೆ ಸಮಾನ ಮನಸ್ಕರ

ಕೆರಗೋಡು ಹನುಮಧ್ವಜ ತೆರವು ವಿವಾದ/ ನಾಳೆ ಬಂದ್ ಆಗುತ್ತಾ ಮಂಡ್ಯ? Read More »

ಸುಳ್ಯ: ಐವರ್ನಾಡಿನಲ್ಲಿ ಧ.ಗ್ರಾ.ಯೋ ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ| ಅಷ್ಟಕ್ಕೂ ಅಲ್ಲಿ ನಡೆದಿದ್ದೇನು?

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಮುತ್ತಿಗೆ ನಡೆಸಿ ಛೀಮಾರಿ ಹಾಕಿದ ಘಟನೆ ದ.ಕ‌ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಏನಿದು ಪ್ರಕರಣ?ಕಳೆದ ಕೆಲ ತಿಂಗಳ ಹಿಂದೆ ಐವರ್ನಾಡಿನಲ್ಲಿ ಕುಂದಾಪುರ ಮೂಲದ ಯೂಟ್ಯೂಬ್ ಚಾನೆಲ್ ಒಂದು ಸಂದರ್ಶನ ನಡೆಸಿ ಕಾರ್ಯಕ್ರಮ ಬಿತ್ತರಿಸಿತ್ತು. ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಕುರಿತಂತೆ ವರದಿ ಮಾಡಲಾಗಿದ್ದು, ಐವರ್ನಾಡಿನಲ್ಲಿ ನಡೆಸಿದ ಸಂದರ್ಶನದ ತುಣುಕಿನಲ್ಲಿ ಜಾತಿನಿಂದನೆ ಕುರಿತಂತೆ ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆ ಯೂಟ್ಯೂಬ್

ಸುಳ್ಯ: ಐವರ್ನಾಡಿನಲ್ಲಿ ಧ.ಗ್ರಾ.ಯೋ ಅಧಿಕಾರಿಗಳಿಗೆ ಗ್ರಾಮಸ್ಥರ ಮುತ್ತಿಗೆ| ಅಷ್ಟಕ್ಕೂ ಅಲ್ಲಿ ನಡೆದಿದ್ದೇನು? Read More »

ಚಿಕ್ಕಮಗಳೂರು : ಕಾಲೇಜು ವಿದ್ಯಾರ್ಥಿನಿ ಡೆಂಗ್ಯೂಗೆ ಬಲಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿಯ ನಿವಾಸಿ ಸಹರಾ ಬಾನು ಡೆಂಗ್ಯೂ ಜ್ವರದಿಂದ ಮೃತ ಪಟ್ಟ ಘಟನೆ ಫೆ.8 ರಂದು ನಡೆದಿದೆ. ಸಹನಾ ಬಾನು (18) ಕಾಲೇಜಿಗೆ ಹೋಗುತ್ತಿದ್ದು ಡೆಂಗ್ಯೂಗೆ ಬಲಿಯಾಗಿದ್ದಾಳೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ಸಹರಾ ಬಾನು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ ಎಂದು ವರದಿಯಾಗಿವೆ.

ಚಿಕ್ಕಮಗಳೂರು : ಕಾಲೇಜು ವಿದ್ಯಾರ್ಥಿನಿ ಡೆಂಗ್ಯೂಗೆ ಬಲಿ Read More »

ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

ಸಮಗ್ರ ನ್ಯೂಸ್: ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಗಳೂರು ಹೊರವಲಯದ ವಲಚ್ಚಿಲ್ ಬಳಿ ನಡೆದಿದೆ. ಶ್ರೀನಿವಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವಿನಿಂದ ಒದ್ದಾಡಿದ್ದಾರೆ. ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ‌ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಊಟದಲ್ಲಿ ಹುಳ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಶಂಕೆ ವ್ಯಕ್ತವಾಗಿದೆ. ಕಾಲೇಜಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ Read More »

ದೆಹಲಿಯಲ್ಲಿ ಕೇರಳ ಸರ್ಕಾರದ ಪ್ರತಿಭಟನೆ

ಸಮಗ್ರ ನ್ಯೂಸ್: ತೆರಿಗೆ ಹಂಚಿಕೆ ವಿಚಾರದಲ್ಲಿ ನಿನ್ನೆ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಇಂದು ತೆರಿಗೆ ಅನ್ಯಾಯದ ವಿರುದ್ಧ ಕೇರಳದ ಆಡಳಿತಾರೂಢ ಎಲ್‌ಡಿಎಫ್ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದೆ. ‘ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ’ ಎಂಬ ಹೆಸರಿನಡಿ ಹೋರಾಟ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಭಾಗಿಯಾದರು. ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ದೆಹಲಿಯಲ್ಲಿ ಕೇರಳ ಸರ್ಕಾರದ ಪ್ರತಿಭಟನೆ Read More »

ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ/ ಫೆ.7 ರಿಂದ 9 ರವರೆಗೆ ಹೈ ಅಲರ್ಟ್

ಸಮಗ್ರ ನ್ಯೂಸ್: ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, 4,807 ಪುರುಷರು, 312 ಹಿಳೆಯರು ಮತ್ತು ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 5,121 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಜನರು ಮತದಾನ ಕೇಂದ್ರಗಳಿಗೆ ಬಾರದಂತೆ ಮತ್ತು ಅಭ್ಯರ್ಥಿಗಳನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಬರೋಬ್ಬರಿ 6.50 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಫೆ.7 ರಿಂದ 9 ರವರೆಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಒಟ್ಟಾರೆ 100 ಕ್ಕೂ ಹೆಚ್ಚು ವಿದೇಶಿ ವೀಕ್ಷಕರು ಪಾಕಿಸ್ತಾನದ ಚುನಾವಣೆ ಮೇಲೆ ಕಣ್ಣಿಟ್ಟಿದ್ದು,

ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ/ ಫೆ.7 ರಿಂದ 9 ರವರೆಗೆ ಹೈ ಅಲರ್ಟ್ Read More »

ಕೊಡಗು: ಮುಂದುವರೆದ ಕಾಡಾನೆ ದಾಳಿ| ವೃದ್ಧೆಯ ಕಾಲು ಮುರಿತ

ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ವೃದ್ಧೆಯ ಕಾಲು ಮುರಿತ ಒಳಗಾದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ಇಂದು (ಫೆ.8) ಮುಂಜಾನೆ ನಡೆದಿದೆ. ವಯೋವೃದ್ಧೆ ಬಹಿರ್ದೆಸೆಗೆ ತೆರಳಿದಾಗ ದಿಢೀರನೇ ಸಲಗ ಧಾಳಿ ನಡೆಸಿದೆ. ಗಾಯಾಳು ವೆಂಕಟಮ್ಮ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

ಕೊಡಗು: ಮುಂದುವರೆದ ಕಾಡಾನೆ ದಾಳಿ| ವೃದ್ಧೆಯ ಕಾಲು ಮುರಿತ Read More »