ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥ
ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥಗೊಂಡ ವಿನೋದ್(27)ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿನೋದ್ ಎಂಬ ಯುವಕ ಮಡಿಕೇರಿಯ ಶಾಪ್ ಒಂದರಿಂದ ಎನರ್ಜಿ ಡ್ರಿಂಕ್ ಖರೀದಿಸಿ ಕುಡಿದಿದ್ದ. ರೆಡ್ ಬುಲ್ ಟಿನ್ ಒಳಗೆ ಲೋಳೆಯಂತ ವಸ್ತು ಪತ್ತೆಯಾಗಿದೆ. ಘಟನೆ ಸಂಬಂಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎನರ್ಜಿ ಡ್ರಿಂಕ್ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥ Read More »