February 2024

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ/ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್

ಸಮಗ್ರ ನ್ಯೂಸ್: ಶಿವಮೂರ್ತಿ ಮುರುಘಾ ಶರಣರ ಮುರುಘಾ ಮಠ ಮತ್ತು SJM ವಿದ್ಯಾಪೀಠ ಆಡಳಿತಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಒಳಗಾಗಿ ಹೈಕೋರ್ಟ್ ಆದೇಶದಂತೆ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್ ನೀಡಿದೆ. ಎರಡು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡುವಂತೆಯೂ ಸೂಚಿಸಿದೆ. ಇದರ ಜೊತೆಗೆ ಮಠದ ಆಡಳಿತವನ್ನು ಸರಕಾರವೇ ನೋಡಿಕೊಳ್ಳುವಂತೆ ಕೋರ್ಟ್ ಸೂಚಿಸಿದೆ. ನ್ಯಾ.ವಿಕ್ರಮನಾಥ್ ನೇತೃತ್ವದ ಪೀಠ ಈ ಸಂಬಂಧ ಮೇಲ್ವಿಚಾರಣಾ ಸಮಿತಿಯಲ್ಲಿ […]

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ/ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್ Read More »

ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್

ಸಮಗ್ರ ನ್ಯೂಸ್: ತುಮಕೂರಿನ ಪಾವಗಡ ತಾಲ್ಲೂಕು ಆಸ್ಪತ್ರೆಯಲ್ಲಿ ಮೊನ್ನೆ ಮೂರು ಜನ ಮಹಿಳೆಯರು ಸಾವು ಪ್ರಕರಣ ನಡೆದಿತ್ತು, ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರ ಮೃತ ಪಟ್ಟಿದ್ದರು. ಈಗ ಈ ಸಾವು ಪ್ರಕರಣ ಸಂಬಂಧ ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, OT ಟೆಕ್ನಿಷಿಯನ್ ಕಿರಣ್ ಹಾಗೂ ಸ್ಟಾಫ್ ನರ್ಸ್ ಪದ್ಮಾವತಿ ಅವರನ್ನು ಸೇವೆಯಿಂದ ವಜಾಗೊಳಿಸಿ ತುಮಕೂರು ಡಿಹೆಚ್​ಓ ಆದೇಶಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್

ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್ Read More »

ರಾಜ್ಯಸಭೆ ಚುನಾವಣೆ|ಮತದಾನಕ್ಕೆ ಗೈರಾದ ಶಿವರಾಂ ಹೆಬ್ಬಾರ್

ಸಮಗ್ರ ನ್ಯೂಸ್: ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಗೆ ಯಲ್ಲಾಪುರ ಬಿಜೆಪಿ ಶಾಸಕ ಅಲಬೈಲ್ ಶಿವರಾಂ ಹೆಬ್ಬಾರ್ ಗೈರಾಗಿದ್ದಾರೆ. ಇನ್ನುಳಿದಂತೆ 222 ಶಾಸಕರು ಮತ ಚಲಾಯಿಸಿದ್ದಾರೆ. ಇಂದು ಬೆಳಗ್ಗೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆದಿತ್ತು. ಎಸ್.ಟಿ ಸೋಮಶೇಖರ್ ಅಡ್ಡಮತದಾನ ಮಾಡಿರುವುದು ಮತ್ತು ಶಿವರಾಂ ಹೆಬ್ಬಾರ್ ಮತದಾನದಿಂದ ದೂರ ಉಳಿದಿರುವುದರಿಂದ ಬಿಜೆಪಿಗೆ ಎರಡು ಮತಗಳು ಕೈತಪ್ಪಿದೆ.

ರಾಜ್ಯಸಭೆ ಚುನಾವಣೆ|ಮತದಾನಕ್ಕೆ ಗೈರಾದ ಶಿವರಾಂ ಹೆಬ್ಬಾರ್ Read More »

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್​​ಬುಕ್ ಖಾತೆ ಹ್ಯಾಕ್

ಸಮಗ್ರ ನ್ಯೂಸ್: ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್​​ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲೇ ಲಾಭ ಬಂದಿದೆ. ನೀವು ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲದೆ, ಕ್ರಿಸ್ಟಿನಾ ಪೆನಾಟೆ ಎಂಬುವರ ಸಲಹೆ ಪಡೆಯಬಹುದು ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ. ತಂದೆಯ ಫೇಸ್​ಬುಕ್ ಖಾತೆ ಹ್ಯಾಕ್ ಆಗಿರುವ ಮಾಹಿತಿ ನೀಡಿದ ಪುತ್ರ ಸಂಕಲ್ಪ ಶೆಟ್ಟರ್, ಯಾರೂ ಕೂಡ ಹಣ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್​​ಬುಕ್ ಖಾತೆ ಹ್ಯಾಕ್ Read More »

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ| ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿಗೆ ಮೂಗು, ಕೆನ್ನೆ, ಕಿವಿಗೆ ಗಾಯವಾಗಿದ್ದು ಪ್ರಾಥಮಿಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾನೆ. ಘಟನೆ ನಡೆದ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ| ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ Read More »

ದಿನಕ್ಕೆ ಎಷ್ಟು ಬಾಳೆಹಣ್ಣು ತಿಂದ್ರೆ ಒಳ್ಳೆಯದು? ಹೆಲ್ತ್ ಟಿಪ್ಸ್ ನಿಮಗಾಗಿ

ಸಮಗ್ರ ನ್ಯೂಸ್: ಸಾಮಾನ್ಯವಾಗಿ ನಾವು ಯಾವುದಾದರೂ, ಮದುವೆ, ಪಾರ್ಟಿ, ಸಮಾರಂಭಕ್ಕೆ ಹೋದಾಗ ಊಟದ ನಂತರ ಬಾಳೆಹಣ್ಣು ನೀಡುವುದನ್ನು ನೀವು ಗಮನಿಸಬಹುದು. ಏಕೆಂದರೆ ಬಾಳೆಹಣ್ಣನ್ನು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು, ನಿಮ್ಮ ಆರೋಗ್ಯವನ್ನು ಸಮತೋಲನದಲ್ಲಿಡಲು ನಿಮ್ಮ ಆಹಾರದಲ್ಲಿ ಬಾಳೆಹಣ್ಣು ಸೇವಿಸುವುದು ಉತ್ತಮ. ಬಾಳೆಹಣ್ಣು ಆರೋಗ್ಯದ ಮೇಲೆ ರಕ್ಷಣಾತ್ಮಕ ಪರಿಣಾಮವನ್ನು ಬೀರುವ ಅಗತ್ಯ ಪೋಷಕಾಂಶಗಳನ್ನು ಹೊಂದಿರುತ್ತವೆ. ಬಾಳೆಹಣ್ಣಿನಲ್ಲಿ ಆರೋಗ್ಯಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳು ಸಮೃದ್ಧವಾಗಿದೆ. ಹಾಗಾಗಿ ಎಲ್ಲ ವಯಸ್ಸಿನವರಿಗೂ ಬಾಳೆಹಣ್ಣು ತಿನ್ನಲು ಆರೋಗ್ಯಕರ ಹಣ್ಣಾಗಿದೆ. ಅನೇಕ ಮಂದಿ ತೂಕ

ದಿನಕ್ಕೆ ಎಷ್ಟು ಬಾಳೆಹಣ್ಣು ತಿಂದ್ರೆ ಒಳ್ಳೆಯದು? ಹೆಲ್ತ್ ಟಿಪ್ಸ್ ನಿಮಗಾಗಿ Read More »

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ವಿಜಯ್ ಶೇಖರ್ ಶರ್ಮಾ ರಾಜೀನಾಮೆ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್‍ನಿಂದ ನಿಬರ್ಂಧಕ್ಕೊಳಪಟ್ಟಿರುವ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ ಸಲ್ಲಿಸಿದ್ದಾರೆ. ಅಕ್ರಮ ನಡೆಸಿದ ಆರೋಪ ಹೊರಿಸಿ ಮಾ.15ರಿಂದ ಪೇಟಿಎಂ ಬ್ಯಾಂಕ್ ಠೇವಣಿ ಸ್ವೀಕರಿಸುವುದು ಮತ್ತು ಸಾಲ ನೀಡುವುದನ್ನು ಆರ್‍ಬಿಐ ನಿಷೇಧಿಸಿತ್ತು. ಹೀಗಾಗಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಅಶೋಕ್ ಕುಮಾರ್ ಗಾರ್ಗ್

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ವಿಜಯ್ ಶೇಖರ್ ಶರ್ಮಾ ರಾಜೀನಾಮೆ Read More »

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್

ಸಮಗ್ರ ನ್ಯೂಸ್: ಶಾಸಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾ.ಪಂ. ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ. ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ಒಬ್ಬ

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ Read More »

ರಾಜ್ಯಸಭಾ ಚುನಾವಣೆ| ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡ ಮತದಾನ

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು. ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ‌. ಆದರೆ ಅವರು ಕಾಲಾವಕಾಶ ನೀಡಲಿಲ್ಲ’ ಎಂದು ಆರೋಪಿಸಿದರು.

ರಾಜ್ಯಸಭಾ ಚುನಾವಣೆ| ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡ ಮತದಾನ Read More »

ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ/ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆ ಸ್ವೀಕಾರ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ ನೀಡಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಜನಸ್ನೇಹಿ ಯೋಜನೆಗಳು ಮತ್ತು ಅಭಿವೃದ್ಧಿ ಯೋಜನೆಗಳನ್ನು ಪ್ರಚುರಪಡಿಸುವ ವಿಕಸಿತ್ ಭಾರತ್ ಮೋದಿಯ ಗ್ಯಾರಂಟಿ ವಿಡಿಯೋ ಪ್ರಚಾರ ರಥಗಳಿಗೆ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದರು. ರಥಗಳಿಗೆ ಎಲ್‍ಸಿಡಿ ಸ್ಕ್ರೀನ್ ಹಾಕಲಾಗಿದ್ದು, ಮೋದಿ ಸಾಧನೆಗಳನ್ನು ಅದರ ಮೇಲೆ ಬಿತ್ತರಿಸಲಾಗುತ್ತದೆ. ಈ ಪ್ರಚಾರ ರಥಗಳು ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲೂ ಸಂಚರಿಸಿ ಸರ್ಕಾರದ ಯೋಜನೆ ಪ್ರಚಾರ ಮಾಡುತ್ತವೆ. ಜೊತೆಗೆ ಬಿಜೆಪಿಯ

ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ/ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆ ಸ್ವೀಕಾರ Read More »