March 2024

ಪತ್ನಿಯ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ಘೋಷಣೆ

ಸಮಗ್ರ ನ್ಯೂಸ್: ಪತಿಯ ಹತ್ಯೆಗೆ ಪತ್ನಿ ₹ 50,000 ಬಹುಮಾನವನ್ನು ಘೋಷಿಸಿದ್ದ ಘಟನೆ ಆಗ್ರಾದ ಬಹ್ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯು ವಾಟ್ಸಾಪ್ ಸ್ಟೇಟಸ್‌ನಲ್ಲಿ ಗಂಡನನ್ನು ಕೊಂದವರಿಗೆ ಬಹುಮಾನ ಘೋಷಣೆ ಮಾಡಿದ್ದಾರೆ. ಪತಿಯು ಪತ್ನಿಯ ಸ್ಟೇಟಸ್ ನೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿಂದೆ ಪತ್ನಿಯ ಸ್ನೇಹಿತರೊಬ್ಬರು ಬೆದರಿಕೆ ಹಾಕಿದ್ದರು ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬಹ್ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಸಿಂಗ್ ಹೇಳಿದ್ದಾರೆ.‌ ಇವರು […]

ಪತ್ನಿಯ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ಘೋಷಣೆ Read More »

ರೆಡ್ ಕಾರ್ಪೆಟ್ ನಿಷೇಧ/ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನದ ನೂತನ ಪರಿಹಾರ

ಸಮಗ್ರ ನ್ಯೂಸ್: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನ ಹಣ ಉಳಿಸಲು ನೂತನ ಪರಿಹಾರದ ಮೊರೆ ಹೋಗಿದ್ದು, ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ರೆಡ್ ಕಾರ್ಪೆಟ್ ಬಳಸುವಂತಿಲ್ಲ ಎಂದು ಪ್ರಧಾನಿ ಶಹಬಾಜ್ ಷರೀಫ್ ಆದೇಶ ಹೊರಡಿಸಿದ್ದಾರೆ. ರೆಡ್ ಕಾರ್ಪೆಟ್ ಬಳಕೆ ನಿಷೇಧಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಹೊರೆ ಕಡಿಮೆ ಮಾಡುವುದು ಇದರ ಹಿಂದಿನ ಉದ್ದೇಶ ಎಂದು ವಿಶ್ಲೇಷಿಸಲಾಗಿದೆ. ರಾಯಭಾರಿಗಳು, ರಾಜತಾಂತ್ರಿಕ ಅಧಿಕಾರಿಗಳು ಭಾಗವಹಿಸುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಾತ್ರ ಶಿಷ್ಟಾಚಾರವಾಗಿ ರೆಡ್ ಕಾರ್ಪೆಟ್ ಬಳಕೆ ಅವಕಾಶ ನೀಡಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ

ರೆಡ್ ಕಾರ್ಪೆಟ್ ನಿಷೇಧ/ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನದ ನೂತನ ಪರಿಹಾರ Read More »

ಜೂನಿಯರ್ ರೆಸಿಡೆಂಟ್​ ಹುದ್ದೆಗಳಿಗೆ 56,100 ಸಂಬಳ- ಆಸಕ್ತರು ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ನವ ದೆಹಲಿ ಮುನ್ಸಿಪಲ್​ ಕಾರ್ಪೊರೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಜೂನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್​ 29, 2024 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ನವ ದೆಹಲಿ ಮುನ್ಸಿಪಲ್​ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಜೂನಿಯರ್ ರೆಸಿಡೆಂಟ್​ ಹುದ್ದೆಗಳಿಗೆ 56,100 ಸಂಬಳ- ಆಸಕ್ತರು ಬೇಗ ಅಪ್ಲೈ ಮಾಡಿ Read More »

ಟಾಟಾ ಮೆಮೋರಿಯಲ್ ಸೆಂಟರ್ ನಲ್ಲಿ ಉದ್ಯೋಗಕ್ಕೆ ಆಹ್ವಾನ, ಒಂದು ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: ಟಾಟಾ ಮೆಮೋರಿಯಲ್ ಸೆಂಟರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಟಾಟಾ ಮೆಮೋರಿಯಲ್ ಸೆಂಟರ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು. ಉದ್ಯೋಗದ ಸ್ಥಳ:ಟಾಟಾ

ಟಾಟಾ ಮೆಮೋರಿಯಲ್ ಸೆಂಟರ್ ನಲ್ಲಿ ಉದ್ಯೋಗಕ್ಕೆ ಆಹ್ವಾನ, ಒಂದು ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ! Read More »

ಮಹಾತ್ಮ ಗಾಂಧಿ ಯೂನಿವರ್ಸಿಟಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರಿಸರ್ಚ್​ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 9, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್​ 25ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ

ಮಹಾತ್ಮ ಗಾಂಧಿ ಯೂನಿವರ್ಸಿಟಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ Read More »

ಬಿಜೆಪಿ 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ;ರಾಹುಲ್‌

ಸಮಗ್ರ ನ್ಯೂಸ್‌ : ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಇಲ್ಲದೇ ʻ400 ಪಾರ್‌ʼ ಘೋಷಣೆ ಮಾಡಲು ಸಾಧ್ಯವಿಲ್ಲ. 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ. ಮೋದಿ ಒಬ್ಬರೇ ಈ ಕೆಲಸ ಮಾಡುತ್ತಿಲ್ಲ. ಅವರ ಜೊತೆಗೆ ಕೆಲವು ಉದ್ಯಮಿಗಳೂ ಸೇರಿಕೊಂಡಿದ್ದಾರೆ ಎಂದು ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ED ಬಂಧನ ಖಂಡಿಸಿ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ I.N.D.I.A. ಒಕ್ಕೂಟದ ʻಪ್ರಜಾಪ್ರಭುತ್ವ ಉಳಿಸಿʼ ಪ್ರತಿಭಟನಾ ರ‍್ಯಾಲಿಯನ್ನು ದ್ದೇಶಿಸಿ ಅವರು, ಬಿಜೆಪಿ ಗೆದ್ದು

ಬಿಜೆಪಿ 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ;ರಾಹುಲ್‌ Read More »

ಕೋಲ್ಕತ್ತಾ: ಲೋಕಸಭಾ ಚುನಾವಣೆ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ; ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ ಎಂದು ಎನ್‌ಡಿಎ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಸವಾಲು ಎಸೆದಿದ್ದಾರೆ. ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಇಂದು ಮಮತಾ ಬ್ಯಾನರ್ಜಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹಾಕಿರುವ ಎನ್‌ಡಿಎ ಒಕ್ಕೂಟಕ್ಕೆ ನಾನು ಸವಾಲು ಎಸೆಯುತ್ತೇನೆ. ಬಿಜೆಪಿಯವರು 400 ಪಾರ್ ಎಂದು ಹೇಳುತ್ತಿದ್ದಾರೆ. ನಾನು ಮೊದಲು 200 ಸೀಟುಗಳ ಮಾನದಂಡವನ್ನು ದಾಟಿ

ಕೋಲ್ಕತ್ತಾ: ಲೋಕಸಭಾ ಚುನಾವಣೆ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ; ಮಮತಾ ಬ್ಯಾನರ್ಜಿ Read More »

ಅರವಿಂದ್ ಕೇಜ್ರಿವಾಲ್ ದೇಶಕ್ಕಾಗಿ ಹೋರಾಡುತ್ತಿದ್ದಾರೆ;ಸುನಿತಾ ಕೇಜ್ರಿವಾಲ್

ಸಮಗ್ರ ನ್ಯೂಸ್ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರು ದೇಶಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಪತ್ನಿ ಸುನಿತಾ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹೇಳುತ್ತಿದೆ. ಕೇಜ್ರಿವಾಲ್ ರಾಜೀನಾಮೆ ನೀಡಬೇಕಾ? ದೇಶಕ್ಕಾಗಿ ಕೇಜ್ರಿವಾಲ್ ಹೋರಾಡುತ್ತಿದ್ದಾರೆ. ಬಹುಶ: ಕೇಜ್ರಿವಾಲ್ ಹಿಂದೆ ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು ಅನಿಸುತ್ತದೆ. ಹೋರಾಟದಲ್ಲಿ ಹುತಾತ್ಮರಾಗಿದ್ದ ಅವರು ಈಗಲೂ ಮತ್ತೆ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು. ಕೇಜ್ರಿವಾಲ್ ಬರೆದ ಪತ್ರವನ್ನು ಓದಿದ ಅವರು,

ಅರವಿಂದ್ ಕೇಜ್ರಿವಾಲ್ ದೇಶಕ್ಕಾಗಿ ಹೋರಾಡುತ್ತಿದ್ದಾರೆ;ಸುನಿತಾ ಕೇಜ್ರಿವಾಲ್ Read More »

ಚಿತ್ರದುರ್ಗದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಜಗಳ

ಸಮಗ್ರ ನ್ಯೂಸ್: ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆಯುತ್ತಿತ್ತು. ಈ ನಡುವೆ ಎರಡು ಗುಂಪುಗಳ ನಡುವಿನ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಗೋವಿಂದ ಕಾರಜೋಳ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಇವರನ್ನು ಜೆಡಿಎಸ್ ಕಾರ್ಯಕರ್ತನೊಬ್ಬ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಕೈ ಕೈ ಮಿಲಾಯಿಸಿಕೊಂಡು ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕಾರಜೋಳ ಎದುರುಗಡೆಯೆ ಹೊಡೆದಾಟ ನಡೆದಿದೆ.

ಚಿತ್ರದುರ್ಗದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಜಗಳ Read More »

ಲೋಕಸಭಾ ಚುನಾವಣೆ/ ಕಾಂಗ್ರೆಸ್ ಪ್ರಚಾರಕರ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದೆ. ಇದೀಗ ಕಾಂಗ್ರೆಸ್ ತನ್ನ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದ್ದು, 40 ಘಟಾನುಘಟಿ ನಾಯಕರ ಹೆಸರುಗಳನ್ನು ಇದು ಒಳಗೊಂಡಿದೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ್, ಜೈರಾಮ್ ರಮೇಶ್, ಎಂ.ವೀರಪ್ಪ ಮೊಯ್ಲಿ, ಲಕ್ಷ್ಮಣ ಸವದಿ, ಬಿ.ವಿ.ಶ್ರೀನಿವಾಸ್, ಕೆ.ಜೆ.ಜಾರ್ಜ್, ಬಿ.ಕೆ.ಹರಿಪ್ರಸಾದ್, ವಿನಯ್ ಕುಮಾರ್ ಸೊರಕೆ, ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್,

ಲೋಕಸಭಾ ಚುನಾವಣೆ/ ಕಾಂಗ್ರೆಸ್ ಪ್ರಚಾರಕರ ಪಟ್ಟಿ ಬಿಡುಗಡೆ Read More »