ಸಮಗ್ರ ನ್ಯೂಸ್: ಕಾರು ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಿನ್ನೆ ಸಾಯಂಕಾಲ ಶಿರುಗುಪ್ಪಿ-ಕಾಗವಾಡ ಮಾರ್ಗದ ರಸ್ತೆಯ ಮಧ್ಯೆ ನಡೆದಿದೆ.
ಈ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ತಾಸಗಾಂವ ತಾಲೂಕಿನ ಉಮೇಶ್ ಕಾಳೆ (46) ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿಯೆಂದು ತಿಳಿದುಬಂದಿದೆ.

MH 13 CS 0739 ವಾಹನದ ಸಂಖ್ಯೆಯ ಕಾರ ಬೆಳಗಾವಿಯಿಂದ ಮಹಾರಾಷ್ಟ್ರ ಕಡೆ ಸಂಚರಿಸುತ್ತಿದ್ದ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನು ಮೂವರ ಸ್ಥಿತಿ ಗಂಭೀರವಾಗಿದ್ದು ಹೆಚ್ಚೀನ ಚಿಕಿತ್ಸೆಗಾಗಿ ಮಹಾರಾಷ್ಟ್ರ ರಾಜ್ಯದ ಮಿರಜ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.