Ad Widget .

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆಟೋಚಾಲಕ| ನಿರ್ಜನ ಪ್ರದೇಶದಲ್ಲಿ ನಡೆದಿತ್ತು ಭೀಕರ ಕ್ರೌರ್ಯ

ಸಮಗ್ರ ನ್ಯೂಸ್: ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.20ರ ಮುಂಜಾನೆ ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ ಕಾಮುಕ.

Ad Widget . Ad Widget .

ಮುಬಾರಕ್ (28) ಎಂಬ ಆಟೋ ಚಾಲಕ ಅತ್ಯಾಚಾರವೆಸಗಿ ಕೊಂದುಹಾಕಿದ್ದು, ಶಾಂತಿನಗರದ ಜನತಾಕೋ ಆಪರೇಟಿವ್ ಕಟ್ಟಡದ ಬಳಿ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಮಹಿಳೆ ಕಟ್ಟಡದಿಂದ ಬಿದ್ದು ಮೃತಪಟ್ಟಂತೆ ಕಾಣುತ್ತಿತ್ತು. ಮರಣೋತ್ತರ ಪರೀಕ್ಷೆ ವೇಳೆ ಅತ್ಯಾಚಾರವೆಸಗಿ ಕೊಂದಿರುವುದು ದೃಢವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆಟೋ ಚಾಲಕ ಮುಬಾರಕ್ ನನ್ನು ಬಂಧಿಸಿದ್ದು, ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

Ad Widget . Ad Widget .

ಮುಂಜಾನೆ ಮಾರ್ಕೆಟ್ ಬಳಿ ನಿಂತಿದ್ದ ಮಹಿಳೆಯನ್ನು ಸಂಪಂಗಿರಾಮನಗರಕ್ಕೆ ಆಟೋ ಚಾಲಕ ಕರೆತಂದಿದ್ದಾನೆ. ಜನತಾ ಕೋ ಆಪರೇಟಿವ್ ಕಟ್ಟಡದ ಮೊದಲ ಮಹಡಿಗೆ ಕರೆದೊಯ್ದಿದ್ದ. ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಹತ್ಯೆಗೀಡಾಗಿರುವ ಮಹಿಳೆಯ ಗುರುತನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಸಂಪಂಗಿರಾಮನಗರ ಠಾಣೆ ಪೊಲೀಸರಿಂದ ತನಿಖೆ ಮುಂದುವರೆದಿದೆ.

Leave a Comment

Your email address will not be published. Required fields are marked *