Ad Widget .

ಮಂಗಳೂರು: ಹಿರಿಯ ಪತ್ರಕರ್ತ‌ ಮನೋಹರ ಪ್ರಸಾದ್ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Ad Widget . Ad Widget .

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಮುಗಿಸಿ “ನವ ಭಾರತ’ ಪತ್ರಿಕೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದರು.

Ad Widget . Ad Widget .

ಬಳಿಕ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಸೇರ್ಪಡೆಗೊಂಡ ಅವರು ಸುದೀರ್ಘ ಕಾಲ ಮುಖ್ಯ ವರದಿಗಾರರಾಗಿ, ಸಹಾಯಕ ಸಂಪಾದಕರಾಗಿ, ಮಂಗಳೂರು ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.

ಓರ್ವ ಸಾಹಿತಿಯೂ ಆಗಿದ್ದ ಮನೋಹರ ಪ್ರಸಾದ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಅನೇಕ ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು.

ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಮನೋಹರ ಪ್ರಸಾದ್ ಅವರು ಕಳೆದ ಎರಡು ವರ್ಷದ ಹಿಂದೆ ವೃತ್ತಿಯಿಂದ ನಿವೃತ್ತರಾಗಿದ್ದರು.

Leave a Comment

Your email address will not be published. Required fields are marked *