Ad Widget .

ನಟ ಶಿವರಾಂ ಬದುಕಿದ್ದಾರೆ, ವದಂತಿಗಳಿಗೆ ಕಿವಿಗೊಡಬೇಡಿ| ಅಳಿಯ, ನಟ ಪ್ರದೀಪ್ ಸ್ಪಷ್ಟನೆ

ಸಮಗ್ರ ನ್ಯೂಸ್: ಮಾಜಿ ಎಐಎಸ್​ ಅಧಿಕಾರಿ, ಬಿಜೆಪಿ ಮುಖಂಡ, ಹಿರಿಯ ನಟ ಕೆ. ಶಿವರಾಂ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸದ್ಯ ಚಿಂತಾಜನಕವಾಗಿದ್ದು, ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಶಿವರಾಂ ಅವರ ಅಳಿಯ, ನಟ ಪ್ರದೀಪ್​ ಮಾಹಿತಿ ನೀಡಿದ್ದಾರೆ.

Ad Widget . Ad Widget . Ad Widget . Ad Widget .

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ನಟ ಪ್ರದೀಪ್​, ನನ್ನ ಮಾವ ಕೆ. ಶಿವರಾಂ ರವರು ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ದಯವಿಟ್ಟು ಯಾರೂ ಅಪಪ್ರಚಾರ ಮಾಡಬೇಡಿ ಎಂದು ವಿನಂತಿಸಿದ್ದಾರೆ.

Ad Widget . Ad Widget .

ಈ ಕುರಿತು ಮಾತನಾಡಿರುವ ನಟ ಪ್ರದೀಪ್​ ಕನ್ನಡದಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದವರು ನಮ್ಮ ಮಾವ ಶಿವರಾಂ ಅವರು ಫೆ.3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಬಾರಿ ಅವರಿಗೆ ಒಂದು ಸಣ್ಣ ಶಸ್ತ್ರ ಚಿಕಿತ್ಸೆ ಆಗಿತ್ತು. ಅದೇ ಡಾಕ್ಟರ್ ಇಲ್ಲಿ ಇರುವುದರಿಂದ ನಾವು ಇಲ್ಲಿಗೆ ದಾಖಲು ಮಾಡಿದ್ದೆವು. ಆಸ್ಪತ್ರೆಗೆ ಅಡ್ಮಿಟ್ ಆದಮೇಲೆ ಲೋ ಬಿಪಿ ಸಮಸ್ಯೆ ಶುರುವಾಯ್ತು. ಅವರಿಗೆ ಟ್ರೀಟ್‌ಮೆಂಟ್ ನಡೆಯುತ್ತಿದೆ ಎಂದು ಆರೋಗ್ಯ ಸ್ಥಿತಿ ಕುರಿತು ಅಳಿಯ ಪ್ರದೀಪ್ ಸ್ಪಷ್ಟನೆ ನೀಡಿದ್ದಾರೆ.

Leave a Comment

Your email address will not be published. Required fields are marked *