Ad Widget .

ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಅರುಣ್ ಕುಮಾರ್ ಪುತ್ತಿಲ| ಸ್ಪರ್ಧೆ ಸ್ಪಷ್ಟಪಡಿಸಿದ ಪುತ್ತಿಲ‌ ಪರಿವಾರ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಪುತ್ತಿಲ ಪರಿವಾರ ಸಂಘಟನೆಯ ನಡುವಿನ ಮಾತುಕತೆ ಫಲಪ್ರದ ಆಗದೇ ಇರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಅರುಣ್‌ಕುಮಾರ್ ಪುತ್ತಿಲ, ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತ ತಿಳಿಸಿದ್ದಾರೆ.

Ad Widget . Ad Widget .

ಗುರುವಾರ ಪುತ್ತೂರಿನಲ್ಲಿ ಮಾತನಾಡಿದ ಅವರು, ‘ಮುಂದಿನ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸಂಘಟನೆ ಜಿಲ್ಲೆಯಲ್ಲಿ ಸ್ಪರ್ಧಿಸುತ್ತದೆ. ಮಾತೃಪಕ್ಷವಾದ ಬಿಜೆಪಿ ಜತೆ ‌ಪುತ್ತಿಲ ಪರಿವಾರ ವಿಲೀನ ಮಾಡಲು ನಮ್ಮದು ಅಭ್ಯಂತರ ಇರಲಿಲ್ಲ. ಕಾರ್ಯಕರ್ತರ ಭಾವನೆಗೆ ಬೆಲೆಕೊಟ್ಟು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಷರತ್ತು ವಿಧಿಸಿದ್ದೆವು. ಈ ಸಂಬಂಧ ಪುತ್ತೂರಿನಲ್ಲಿ ನಡೆದ ಪುತ್ತಿಲ ಪರಿವಾರದ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಗೆ ಮೂರು ದಿನಗಳ ಗಡುವು ನೀಡಿ, ನಿರ್ಧಾರ ತಿಳಿಸಬೇಕು ಎಂದು ಆಗ್ರಹಿಸಿದ್ದೆವು. ನಂತರ ಅನೇಕ ಬಾರಿ ಸಂಧಾನ ಮಾತುಕತೆ ನಡೆದಿದ್ದರೂ ಫಲ ದೊರೆತಿಲ್ಲ’ ಎಂದರು.

Ad Widget . Ad Widget .

ಬಿಜೆಪಿ ನಾಯಕರಾದ ಬಿ.ಎಸ್. ಯಡಿಯೂರಪ್ಪ. ಬಿ.ಎಲ್. ಸಂತೋಷ್, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಜತೆ ಮಾತುಕತೆ ನಡೆಸಲಾಗಿದೆ. ಎಲ್ಲರಿಂದಲೂ ಸಕಾರಾತ್ಮಕ ಸ್ಪಂದನೆ ಸಿಕ್ಕಿದ್ದರೂ ಈವರೆಗೆ ಅವರು ಯಾವ ನಿರ್ಧಾರ ಕೈಗೊಂಡಿಲ್ಲ. ಬೇಡಿಕೆಗೆ ಸ್ಪಂದಿಸಲು ಮಾತೃಪಕ್ಷ ವಿಫಲವಾಗಿರುವುದರಿಂದ ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎಂದರು.

Leave a Comment

Your email address will not be published. Required fields are marked *