ಬೆಳಗಾವಿ:ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ|ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್:ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Ad Widget ... ..

ಬಸ್ ನಲ್ಲಿ 28 ಪ್ರಯಾಣಿಕರು ಇದ್ದರು. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ತಕ್ಷಣ ಬಸ್ ಚಾಲಕ ಬಸ್ ನ್ನು ರಸ್ತೆ ಬದಿ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಲಗಿಸಿದ್ದಾರೆ.

Ad Widget

ಕ್ಷೇಣಾರ್ಧದಲ್ಲಿ ಬೆಂಕಿಯ ಕೆನ್ನಾಳಿಗೆ ಸಂಪೂರ್ಣ ಬಸ್ ಆವರಿಸಿದ್ದು, ಇಡೀ ಬಸ್ ಸುಟ್ಟು ಕರಕಲಾದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿ ಶರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *