ಮಡಿಕೇರಿಯಲ್ಲಿ ನೂತನ ಆಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಮಡಿಕೇರಿ ನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಜಿಲ್ಲಾ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

Ad Widget ... ..

ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ಸಂದರ್ಭ ಹೊರ ಭಾಗದಲ್ಲಿ ಹಾಕಿದ್ದ ಸ್ಟೇಜ್‌ನಿಂದ ಬಿದ್ದಿದ್ದಾರೆ. 30 ಅಡಿ ಎತ್ತರದಿಂದ ಸಿಮೆಂಟ್ ನೆಲಕ್ಕೆ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ad Widget

ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಶವಗಾರಕ್ಕೆ ರವಾನಿಸಿದ್ದಾರೆ. ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದೇ ಈ ಅನಾಹುತಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Comment

Your email address will not be published. Required fields are marked *