Ad Widget .

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆ ದರೋಡೆ ಪ್ರಕರಣ| ನಾಲ್ವರು ವಶಕ್ಕೆ, ಉಳಿದವರಿಗೆ ಬಲೆ ಬೀಸಿದ ಖಾಕಿ ಪಡೆ

ಸಮಗ್ರ ನ್ಯೂಸ್ : ಬಂಟ್ವಾಳ ತಾಲೂಕಿನ ವಿಟ್ಲ‌ ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಗೆ ನುಗ್ಗಿದ ದರೋಡೆಕೋರರು ಚಿನ್ನ ಹಾಗೂ ನಗದು ದೋಚಿದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತು ದ.ಕ.ಜಿಲ್ಲಾ ವಿಶೇಷ ಕ್ರೈಂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಾಲ್ಕು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳಿಗಾಗಿ ಬಲೆ ಬಿಸಿದ್ದಾರೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಅಡ್ಯನಡ್ಕದ ಕರ್ಣಾಟಕ ಬ್ಯಾಂಕ್ ನಲ್ಲಿ ಫೆ.7 ರಂದು ಕಟ್ಟಡದ ಹಿಂಬದಿಯ ಕಿಟಕಿ ಒಡೆದು ಬ್ಯಾಂಕಿನೊಳಗೆ ನುಗ್ಗಿದ ದರೋಡೆಕೋರರು ಚಿನ್ನ ಮತ್ತು ಸುಮಾರು 16 ಲಕ್ಷ ನಗದು ದೋಚಿದ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget . Ad Widget .

ಪ್ರಕರಣ ಸಂಬಂಧ ಮಂಗಳೂರು ನಗರ ಸಿಸಿಬಿ ಪೊಲೀಸರ ತಂಡ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವಿಶೇಷ ಕ್ರೈಂ ಪೊಲೀಸರ ತಂಡ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರಿನ ಸಿಸಿ ಕ್ಯಾಮರಾದ ದೃಶ್ಯಾವಳಿಗಳನ್ನು ಆಧರಿಸಿ ಕೇರಳ ,ಮುಂಬಯಿ ,ಬೆಂಗಳೂರು ಕಡೆ ಕಾರ್ಯಾಚರಣೆ ನಡೆಸಿ ಕಾಸರಗೋಡು, ಬಂಟ್ವಾಳ, ಬೆಳ್ತಂಗಡಿ ನಿವಾಸಿಗಳು ಸೇರಿದಂತೆ ನಾಲ್ಕು ಜನ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ವಶಕ್ಕೆ ಪಡೆದ ಆರೋಪಿಗಳಿಂದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದು‌ ಬ್ಯಾಂಕ್ ನಿಂದ ದರೋಡೆ ಮಾಡಿದ ಚಿನ್ನಾಭರಣಗಳನ್ನು ಹೊರ ರಾಜ್ಯದಲ್ಲಿ ಮಾರಾಟ ಮಾಡಿದ್ದು, ಅದನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವು ಮಂದಿ ಭಾಗಿಯಾಗಿರುವ ಕಾರಣ ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *