ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಿದ ಮೊಹಮ್ಮದ್ ರಸೂಲ್ ಕಡ್ದಾರೆನನ್ನು (45) ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರದ ರಂಗಂಪೇಟೆ ನಿವಾಸಿಯಾಗಿರುವ ರಸೂಲ್ ಕಡ್ದಾರೆ ಹೈದರಾಬಾದ್ನಲ್ಲಿ ಕೂಲಿ ಮಾಡುತ್ತಿದ್ದನು.
ಕೈಯಲ್ಲಿ ತಲ್ವಾರ್ ಹಿಡಿದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ “ಕಾಂಗ್ರೆಸ್ ಹೀಗೆಲ್ಲ ಆಡಳಿತ ಮಾಡಿಲ್ಲ. ನರೇಂದ್ರ ಮೋದಿ ಪ್ರಧಾನಿ ಆಗದ್ದೇನೆ ಎಂದು ನಾಟಕ ಮಾಡುತ್ತಿದ್ದಿಯಾ? ಆಡಳಿತ ಸರಿಯಾಗಿ ಮಾಡುತ್ತಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ನಿಮ್ಮಂತಹ ಕೆಟ್ಟ ಆಡಳಿತ ಮಾಡಿಲ್ಲ. ನೀನು ಟೀ ಮಾರಾಟ ಮಾಡುತ್ತಿದ್ದೆ. ಪಕ್ಷ ಬಿಟ್ಟು ನನ್ನ ಜೊತೆ ಜಗಳಕ್ಕೆ ಬಾ. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಪ್ರಧಾನಿ ಮೋದಿ ನಿನ್ನ ದೇಹದ ನರಗಳು ಕಟ್ ಮಾಡುತ್ತೇನೆ. ಕಾಂಗ್ರೆಸ್ ಜಿಂದಾಬಾದ್” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದನು.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಕಂಡ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಶರಣು ನಾಯಕ ಸುರುಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐಪಿಸಿ 505(1) (ಬಿ), 25(1)(ಬಿ) ಹಾಗೂ ಆರ್ಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ವಿಚಾರ ತಿಳಿದು ಪೊಲೀಸರು ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಬಳಿಕ ಆರೋಪಿ ರಸೂಲ್ನನ್ನು ವಿಚಾರಣೆಗೆ ಒಳಪಡಿಸಿದಾಗ, ಕುಡಿದ ಅಮಲಿನಲ್ಲಿ ನಿಂದಿಸಿ ಬೆದರಿಕೆ ಹಾಕಿದ್ದಾಗಿ ಹೇಳಿದ್ದಾನೆ.