Ad Widget .

2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಹಲವೆಡೆ ಬಾಂಬ್ ಬ್ಲಾಸ್ಟ್: ಸಿಎಂಗೆ ಬಂತು ಬೆದರಿಕೆ ಇ ಮೇಲ್

ಸಮಗ್ರ ನ್ಯೂಸ್: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಬೆನ್ನಲೆ ಇದೀಗ ಹೊಸ ಆತಂಕ ಸೃಷ್ಟಿಯಾಗಿದೆ. ಮಾರ್ಚ್ 2ನೇ ತಾರೀಕು ಮಧ್ಯಾಹ್ನ 2.48ಕ್ಕೆ ಬಂದ ಆ ಒಂದು ಇ ಮೇಲ್ ಎಲ್ಲರನ್ನೂ ಬೆಚ್ಚಿಬೀಳುಸುವಂತಿದೆ.
ಹೌದು 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಬಸ್ , ರೈಲು, ಬಸ್ ಸ್ಟಾಂಡ್ ಸೇರಿ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿರುವುದು ಇದೀಗ ಬೆಳಕಿಗೆ ಬಂದಿದೆ.

Ad Widget . Ad Widget .

ಸಿಎಂ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ ಬೆದರಿಕೆ ಇ ಮೇಲ್ ಬಂದಿದ್ದು, ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಫೋಟ ಮಾಡಲಾಗುವುದು ಎಂದು ಇಮೇಲ್​ನಲ್ಲಿ ಬೆದರಿಕೆ ಹಾಕಲಾಗಿದೆ. ಇಮೇಲ್​ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ. 10786progongmail.com ಎನ್ನುವ ಮೇಲ್ ಐಡಿಯಿಂದ ಬೆದರಿಕೆ ಬಂದಿದ್ದು, ಸದ್ಯ ಸಿಸಿಬಿ ಪೊಲೀಸರು ಈ ಇಮೇಲ್ ಬಗ್ಗೆ ತನಿಖೆ ನಡೆಸಿದ್ದಾರೆ.

Ad Widget . Ad Widget .

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ನಾಲ್ಕು ದಿನ ಕಳೆದರೂ ಸಹ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಉಗ್ರನ ಸಣ್ಣ ಸುಳಿವು ಸಿಗುತ್ತಿಲ್ಲ. ಸಿಸಿ ಟಿವಿ ದೃಶ್ಯಗಳು ಸಿಗುತ್ತಿವೆಯೇ ಹೊರತು, ಬಾಂಬರ್ ಎಲ್ಲಿದ್ದಾನೆ ಎನ್ನುವುದು ಖಾಕಿಗೆ ಗೊತ್ತಾಗುತ್ತಿಲ್ಲ. ಒಂದ್ಕಡೆ ಎಫ್‌ಎಸ್‌ಎಲ್ ತಂಡ, ಮತ್ತೊಂದೆಡೆ ಸಿಸಿಬಿ ಪೊಲೀಸರು, ಇನ್ನೊಂದೆಡೆ NIA ಅಧಿಕಾರಿಗಳೂ ಫೀಲ್ಡ್‌ಗಳಿಂದು ಶಂಕಿತ ಉಗ್ರನ ಬೆನ್ನತ್ತಿದ್ದಾರೆ. ಇದರ ಮಧ್ಯೆ ಮತ್ತೊಂದು ಬಾಂಬ್ ಬೆದರಿಕೆ ಇಮೇಲ್ ಬಂದಿದೆ.

Leave a Comment

Your email address will not be published. Required fields are marked *