ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ಗೆ ಸುಪ್ರೀಂ ಕೋರ್ಟ್ ಇಂದು ಬಿಗ್ ರಿಲೀಫ್ ನೀಡಿದೆ. ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ.
ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
2017 ಆಗಸ್ಟ್ ನಲ್ಲಿ ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್ ಕೇಳಿಬಂದಿತ್ತು. ಆದಾಯ ತೆರಿಗೆ ಇಲಾಖೆಯಿಂದ ಡಿಕೆಶಿ ಕನಕಪುರ ಮನೆ, ಬೆಂಗಳೂರು ನಿವಾಸ, ಕಚೇರಿ ಸೇರಿ 39 ಕಡೆ ದಾಳಿ ನಡೆಸಲಾಗಿತ್ತು. ಆದಾಯ ತೆರಿಗೆ ಅಧಿಕಾರಿಗಳಿಂದ ಡಿಕೆಶಿ ವಿಚಾರಣೆ ನಡೆದಿತ್ತು. ಐಟಿ ಅಧಿಕಾರಿಗಳ ದಾಳಿ ವೇಳೆ 7.5 ಕೋಟಿ ರೂಪಾಯಿ ವಶ ಪಡೆದು ಕೊಳ್ಳಲಾಗಿತ್ತು.
2019 ಸೆಪ್ಟೆಂಬರ್ 15 ರಂದು ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿತ್ತು, ಆ ನಂತರ ಡಿಕೆಶಿ ಮೇಲೆ FIR ದಾಖಲಾಗಿ ತನಿಖೆ ನಡೆಸಲಾಗಿತ್ತು. 2023 ರಲ್ಲಿ ಸಿಬಿಐ ತನಿಖೆ ವಾಪಸ್ಸು ಪಡೆದಿತ್ತು ಕಾಂಗ್ರೆಸ್ ಸರ್ಕಾರ, ಆದರೆ ಇದೀಗ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.