Ad Widget .

ಮಂಗಳೂರು ವಿವಿ‌ ನೂತನ ಕುಲಪತಿಯಾಗಿ ಪ್ರೊ. ಪಿ.ಎಲ್ ಧರ್ಮ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

Ad Widget . Ad Widget .

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ಇಂದು ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಅಧಿಕಾರ ಸ್ವೀಕರಿಸಿದ್ದಾರೆ.

Ad Widget . Ad Widget .

ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ.ಪಿ.ಎಲ್. ಧರ್ಮ ಅವರು ಮಂಗಳೂರು ವಿವಿಯ 10ನೇ ಕುಲಪತಿಯಾಗಿದ್ದಾರೆ. ಮಂಗಳೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಕುಲಪತಿ ಹುದ್ದೆಗೇರುವ ಅವಕಾಶ ಗಿಟ್ಟಿಸಿಕೊಂಡವರಲ್ಲಿ ಎರಡನೇಯವರು ಪ್ರೊ.ಧರ್ಮ. ಈ ಹಿಂದೆ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯರಿಗೆ ಮೊದಲ ಅವಕಾಶ ಸಿಕ್ಕಿತ್ತು.

ಪ್ರಭಾರ ಕುಲಪತಿ ಪ್ರೊ.ಜಯರಾಜ ಅಮೀನ್ ಅವರಿಂದ ಅಧಿಕಾರ ಸ್ಪೀಕರಿಸಿದರು. ಪಿ.ಎಲ್.ಧರ್ಮ ಈ ಹಿಂದೆ ಮಂಗಳೂರು ವಿವಿಯ ಕುಲಸಚಿವ( ಮೌಲ್ಯಮಾಪನ)ರಾಗಿ , ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಹಿಂದಿನ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರ ಅಧಿಕಾರದ ಅವಧಿ ಜೂ.2 , 2023ರಲ್ಲಿ ಕೊನೆಗೊಂಡ ಬಳಿಕ ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಹಿರಿಯ ಡೀನ್ ಪ್ರೊ.ಜಯರಾಜ್ ಅಮೀನ್ ಪ್ರಭಾರ ಕುಲಪತಿಯಾಗಿಯಾಗಿದ್ದರು.

Leave a Comment

Your email address will not be published. Required fields are marked *