ಸುಳ್ಯ: ಬೆಳ್ಳಂಬೆಳಗ್ಗೆ ಮನೆಮೇಲೆ ಎನ್ಐಎ ದಾಳಿ; ಪರಿಶೀಲನೆ

ಸಮಗ್ರ ನ್ಯೂಸ್: ಎನ್ಐಎ ಅಧಿಕಾರಿಗಳ ತಂಡವೊಂದು ಬೆಳ್ಳಂಬೆಳಗ್ಗೆ ಮನೆಯೊಂದರ ಮೇಲೆಲ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ.

Ad Widget ... ..

ಎನ್ಐಎ ಅಧಿಕಾರಿಗಳ ತಂಡವು ಇಲ್ಲಿನ ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ad Widget

ಬೆಳ್ಳಾರೆ ಮಾತ್ರವಲ್ಲದೇ, ದೇಶದ 7 ಕಡೆ ಏಕಕಾಲದಲ್ಲಿ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಎಲ್ಲ ದಾಳಿಗಳಿಗೂ ಒಂದಕ್ಕೊಂದು ಲಿಂಕ್‌ ಇದೆಯೇ ಎನ್ನುವ ಬಗ್ಗೆ ಇನ್ನಷ್ಟೆ ತಿಳಿದು ಬರಬೇಕಿದೆ

Leave a Comment

Your email address will not be published. Required fields are marked *