ಸಮಗ್ರ ನ್ಯೂಸ್: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಬಂಧಿತ ಆರೋಪಿಗಳು. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡು ಹೋಗಿದ್ದಾರೆ.
ಇತ್ತೀಚೆಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ಆರೋಪ ಪ್ರತ್ಯಾರೋಪಗಳ ನಡುವೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಎಫ್.ಎಸ್.ಎಲ್. ವರದಿ ಆಧರಿಸಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.