ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಸ್ಕ್ಯಾಮ್| ವೈದ್ಯರಿಂದ ಬರೋಬ್ಬರಿ 74 ಭ್ರೂಣಹತ್ಯೆ

ಸಮಗ್ರ ನ್ಯೂಸ್: ಇತ್ತೀಚೆಗೆ ಮಂಡ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಕೇಳಿ ಬಂದಿತ್ತು. ಆದರೆ ಇದೀಗ ಮತ್ತೆ ಇದೆ ಕೇಸ್ ಕೇಳಿಬಂದಿದೆ. ಭ್ರೂಣ ಹತ್ಯೆ ತಡೆಗೆ ನಿಷೇಧವಿದ್ದರು ಈಗ ನೆಲಮಂಗಲ ನಗರದ ಆಸರೆ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿದ್ದು ವೈದ್ಯರು ಬರೋಬ್ಬರಿ 74 ಭ್ರೂಣಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Ad Widget ... ..

ಡಾಕ್ಟರ್ ರವಿಕುಮಾರ್‌ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. MTPಕಾಯ್ದೆ ಪರವಾನಗಿ ಪಡೆಯದೇ ಬೇಕಾಬಿಟ್ಟಿಯಾಗಿ ಗರ್ಭಪಾತ ಮಾಡಿಸಲಾಗುತ್ತಿದೆ. ಪೂರ್ಣಾವಧಿ ತಲುಪುವ ಮೊದಲು ಅಬಾರ್ಶನ್ ಮಾಡಿಸಲಾಗುತ್ತಿದೆ. ಅವಶ್ಯಕವಾಗಿ ಬೇಕಾದ ಸ್ಕ್ಯಾನಿಂಗ್ ರಿಪೋರ್ಟ್ ಇಲ್ಲ. ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಸಣ್ಣದಾಗಿ ನಮೂದಿಸಿದ್ದು ಸರಿಯಾಗಿ ರೆಕಾರ್ಡ್ ಏನು ಇಲ್ಲ, ಆಸ್ಪತ್ರೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.

Ad Widget

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ ಮಾಹಿತಿ ತಿಳಿದುಕೊಂಡು ಮಾತನಾಡುತ್ತೇವೆ ಎಂದು ಹೇಳಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಈಗ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *