Ad Widget .

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಡೆವಲಪ್‌ಮೆಂಟ್ ಸ್ಥಾಪನೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 118 ಅಪ್ರೆಂಟಿಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್​ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget .

ಹುದ್ದೆಯ ಮಾಹಿತಿ:
ಗ್ರಾಜುಯೇಟ್ ಅಪ್ರೆಂಟಿಸ್- 28
ಡಿಪ್ಲೊಮಾ ಅಪ್ರೆಂಟಿಸ್- 60
ಟೆಕ್ನಿಷಿಯನ್ ಅಪ್ರೆಂಟಿಸ್- 30

Ad Widget . Ad Widget .

ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್- ಬಿಇ/ಬಿ.ಟೆಕ್
ಡಿಪ್ಲೊಮಾ ಅಪ್ರೆಂಟಿಸ್- ಡಿಪ್ಲೊಮಾ
ಟೆಕ್ನಿಷಿಯನ್ ಅಪ್ರೆಂಟಿಸ್- ITI

ವಯೋಮಿತಿ:
ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಡೆವಲಪ್‌ಮೆಂಟ್ ಸ್ಥಾಪನೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು ಮಾರ್ಚ್ 17, 2024ಕ್ಕೆ 18 ವರ್ಷ ತುಂಬಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಬೆಂಗಳೂರು

ವೇತನ:
ಗ್ರಾಜುಯೇಟ್ ಅಪ್ರೆಂಟಿಸ್- ಮಾಸಿಕ ₹ 9,000
ಡಿಪ್ಲೊಮಾ ಅಪ್ರೆಂಟಿಸ್- ಮಾಸಿಕ ₹ 8,000
ಟೆಕ್ನಿಷಿಯನ್ ಅಪ್ರೆಂಟಿಸ್- ಮಾಸಿಕ ₹ 7,000

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ದಾಖಲಾತಿ ಪರಿಶೀಲನೆ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ಗಳ​ನ್ನು ಈ ಕೆಳಗೆ ನೀಡಲಾಗಿದೆ.

https://nats.education.gov.in/student_type.php apply here

Leave a Comment

Your email address will not be published. Required fields are marked *