ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರವೆಸಗಿದ ಘಟನೆ ನಡೆದಿದೆ. ತುಮಕೂರು ನಗರದ ಬಂಡೆಪಾಳ್ಯದ ಮನೆಯೊಂದರಲ್ಲಿ ಸಾಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ.

Ad Widget ... ..

ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿಯು ತನ್ನ ಸ್ನೇಹಿತನೊಟ್ಟಿಗೆ ಬೆಟ್ಟದ ಬಳಿ ಕುಳಿತಿದ್ದಳು. ಅಲ್ಲಿಗೆ ಬಂದ ಮೂವರು ಕಿರಾತಕರು ಬಾಲಕಿಯನ್ನು ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ಮೂವರು ಕಿರಾತಕರು ಮೊಬೈಲ್‌ನಲ್ಲಿ ವಿಡಿಯೊವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಆ ವಿಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಇದರಿಂದ ಬಾಲಕಿ ಭಯಗೊಂಡಿದ್ದಾಳೆ. ಈ ವೇಳೆ ಬಾಲಕಿಯನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮಠದ ಪಕ್ಕದಲ್ಲಿರುವ ಬಂಡೆಪಾಳ್ಯದ ರೂಂನಲ್ಲೇ ಅತ್ಯಾಚಾರ ಮಾಡಿದ್ದಾರೆ. ನಂತರ ಮಠದ ಬಳಿ ಬಿಟ್ಟು ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಆ ನಂತರ ಸ್ನೇಹಿತ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾನೆ.

Ad Widget

ಪ್ರಕರಣ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮೂವರನ್ನ ಬಂಧಿಸಲಾಗಿದೆ. ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ, ಪ್ರತಾಪ್ ಬಂಧಿತ ಆರೋಪಿಗಳು

Leave a Comment

Your email address will not be published. Required fields are marked *