Ad Widget .

ಉಡುಪಿಯಲ್ಲಿ ರಸ್ತೆ ಅಪಘಾತ: ಗರ್ಭಿಣಿ ಮಂಗ ಮೃತ್ಯು

ಸಮಗ್ರ ನ್ಯೂಸ್: ಗರ್ಭಿಣಿ ಮಂಗವೊಂದು ರಸ್ತೆ ದಾಟುತ್ತಿದ್ದಾಗ ವಾಹನ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಪರಿಣಾಮ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ.

Ad Widget . Ad Widget .

ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಂಗವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ದೊಡ್ಡರಂಗಡಿಯ ಪ್ರವೀಣ್ ಶೆಟ್ಟಿಯವರ ಸಹಕಾರದೊಂದಿಗೆ ಬೈಲೂರಿನ ಪಶು ಚಿಕಿತ್ಸಾ ಕೇಂದ್ರಕ್ಕೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪಶುವೈದ್ಯ ಡಾ. ವಾಗೇಶ್ ಚಿಕಿತ್ಸೆ ನೀಡಿದರೂ ಮಂಗಕ್ಕೆ ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದೆ.

Ad Widget . Ad Widget .

ಬಳಿಕ ಮಂಗದ ಕಳೇಬರವನ್ನು ನಿತ್ಯಾನಂದ ಒಳಕಾಡು ಅವರು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಇನ್ನು ಮಂಗದ ಅಂತ್ಯಸಂಸ್ಕಾರವು ಬ್ರಹ್ಮಗಿರಿಯಲ್ಲಿನ ಅರಣ್ಯ ಇಲಾಖೆಯ ವಠಾರದಲ್ಲಿ ನಡೆಯಿತು. ಈ ಸಂದರ್ಭ ಉಪ ವಲಯ ಅರಣ್ಯಾಧಿಕಾರಿ ಗುರುರಾಜ್, ವಲಯ ಅರಣ್ಯಾಧಿಕಾರಿ ವನಜಾಕ್ಷಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *